AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಬಸ್​ಗೆ ಕಾಯುತ್ತಿದ್ದವರ ಮೇಲೆ ಕಾರಿನ ರೂಪದಲ್ಲಿ ಬಂದೆರಗಿದ ಯಮ!

ನೋಡ ನೋಡುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ಇವರ ಮೇಲೆ ಹರಿದಿದೆ. ನಂತರ ಕಾರು ಮರಕ್ಕೆ ಡಿಕ್ಕಿ ಆಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಸ್ತೆ ಬದಿ ಬಸ್​ಗೆ ಕಾಯುತ್ತಿದ್ದವರ ಮೇಲೆ ಕಾರಿನ ರೂಪದಲ್ಲಿ ಬಂದೆರಗಿದ ಯಮ!
ರಸ್ತೆ ಅಪಘಾತದಲ್ಲಿ ನಜ್ಜು-ಗುಜ್ಜಾದ ಕಾರು
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 8:23 PM

Share

ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲೋದು ತುಂಬಾನೇ ಅಪಾಯಕಾರಿ ಎನ್ನೋದು ಅನೇಕರಿಗೆ ಅರಿವಾಗಿರುತ್ತದೆ. ಏಕೆಂದರೆ, ನಮ್ಮ ಪಾಡಿಗೆ ನಾವು ನಿಂತಿದ್ದರೂ ರಸ್ತೆ ಬದಿಯಲ್ಲಿ ಓಡಾಡುವ ವಾಹನ ನಮ್ಮ ಮೇಲೆ ಬಂದೆರಗಬಹುದು. ಈಗ ಉಡುಪಿಯಲ್ಲಿ ಇದೇ ರೀತಿ ಆಗಿ ಇಬ್ಬರು ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅದೇ ಊರಿನ ನಿವಾಸಿ ಸಂಜೀವ ದೇವಾಡಿಗ (45) ಹಾಗೂ ಉತ್ತರ ಪ್ರದೇಶ ಮೂಲದ ಅರವಿಂದ್ (22) ಬಸ್​ಗಾಗಿ ಕಾಯುತ್ತಿದ್ದರು. ಎಷ್ಟೇ ಹೊತ್ತಾದರೂ ಬಸ್​ ಮಾತ್ರ ಬಂದಿರಲಿಲ್ಲ. ಆದರೆ ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಏಕಾಏಕಿ ಇವರತ್ತ ತಿರುಗಿದೆ.

ನೋಡ ನೋಡುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ಇವರ ಮೇಲೆ ಹರಿದಿದೆ. ನಂತರ ಕಾರು ಮರಕ್ಕೆ ಡಿಕ್ಕಿ ಆಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧುಗಿರಿ-ಹಿಂದೂಪುರ ರಸ್ತೆಯ ಬಳಿ ಬೈಕ್​ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರ ಸಾವು

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ