ನವದೆಹಲಿ/ಬೆಂಗಳೂರು, (ಜುಲೈ 29): ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಇಂದು(ಜುಲೈ 29) ಆದೇಶ ಹೊರಡಿಸಿದ್ದಾರೆ. ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಹಂತದ ಮೇಲಕ್ಕೆ ಹೋಗಿದ್ದಾರೆ.
ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಈ ಹಿಂದೆ ವಿಧಾನಪರಿಷತ್ಗೆ ಆಯ್ಕೆಯಾಗಿ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಕೋಟ ಶ್ರೀನಿವಾಸ್ ಪೂಜಾರಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ @KotasBJP ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ… pic.twitter.com/To8vywL0wl
— Vijayendra Yediyurappa (@BYVijayendra) July 29, 2024
ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರೆ ನಾಯಕರು ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ , ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯ ಸಚೇತಕರಾಗಿಯು ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುವರೆಂಬ ವಿಶ್ವಾಸದೊಂದಿಗೆ ಶುಭ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.