ಉಡುಪಿ ಕೃಷ್ಣ ಮಠದ ವಿದ್ಯುತ್ ವ್ಯವಸ್ಥೆಯನ್ನು ಸೋಲಾರ್ ಸಿಸ್ಟಮ್​ಗೆ ವರ್ಗಾವಣೆ; ಪರಿಸರ ಸಂರಕ್ಷಣೆಗೆ ಮಹತ್ವದ ನಿರ್ಧಾರ

ಸುಮಾರು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್​ಗಳನ್ನು ಅಳವಡಿಸಲಾಗಿದೆ. ಮಠಕ್ಕೆ ಬೇಕಾದಷ್ಟು ವಿದ್ಯುತ್ ಸಂಪೂರ್ಣ ಬಳಕೆಯಾದ ನಂತರ ಮಿಕ್ಕಿದ ವಿದ್ಯುತ್ತನ್ನು ಮೆಸ್ಕಾಂಗೆ ಮಾರಾಟ ಮಾಡಲು ಕೃಷ್ಣ ಮಠ ಸಜ್ಜಾಗಿದೆ. ರಾಜಾಂಗಣದ ಮೇಲ್ಭಾಗದಲ್ಲಿ ಸೋಲಾರ್ ಪ್ಯಾನಲ್​ಗಳನ್ನು ಅಳವಡಿಸಲಾಗಿದೆ. ಪರಿಸರಕ್ಕೆ ಇದೊಂದು ಮಹತ್ವದ ಕೊಡುಗೆಯಾಗಲಿದೆ ಎಂದು ಅದಮಾರು ಮಠಾಧೀಶ ಈಶಪ್ರಿಯ ತೀರ್ಥರು ತಿಳಿಸಿದ್ದಾರೆ.

ಉಡುಪಿ ಕೃಷ್ಣ ಮಠದ ವಿದ್ಯುತ್ ವ್ಯವಸ್ಥೆಯನ್ನು ಸೋಲಾರ್ ಸಿಸ್ಟಮ್​ಗೆ ವರ್ಗಾವಣೆ; ಪರಿಸರ ಸಂರಕ್ಷಣೆಗೆ ಮಹತ್ವದ ನಿರ್ಧಾರ
ಉಡುಪಿ ಕೃಷ್ಣ ಮಠದ ಸಂಪೂರ್ಣ ವಿದ್ಯುತ್ ವ್ಯವಸ್ಥೆಯನ್ನು ಸೋಲಾರ್ ಸಿಸ್ಟಮ್​ಗೆ ವರ್ಗಾವಣೆ
Follow us
| Edited By: preethi shettigar

Updated on:Jun 20, 2021 | 8:29 AM

ಉಡುಪಿ: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್​ಡೌನ್​ ಇನ್ನೂ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ. ದೇವಾಲಯಗಳು, ಮಠಗಳು ಇನ್ನೂ ಕೂಡ ತೆರೆದಿಲ್ಲ. ಮಠಕ್ಕೆ ಭಕ್ತರ ಭೇಟಿಗೆ ಅವಕಾಶ ಕೂಡ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಆರಂಭವಾದಾಗಿನಿಂದ, ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವುದಕ್ಕೆ ಸಾಧ್ಯವಾಗಿಲ್ಲ. ಈ ಸಂದರ್ಭವನ್ನು ಅನುಕೂಲವಾಗಿ ಮಾಡಿಕೊಂಡಿರುವ ಅದಮಾರು ಮಠದವರು ಕೃಷ್ಣ ಮಠದ ಜೀರ್ಣೋದ್ಧಾರಕ್ಕೆ ನಾನಾ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೆ ಎನ್ನುವುದು ವಿಶೇಷ.

ಸ್ವದೇಶಿ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡುವ ಅದಮಾರು ಮಠದ ಈಶಪ್ರಿಯ ತೀರ್ಥರು ಈಗಾಗಲೇ ಸಂಪೂರ್ಣ ಮಠವನ್ನು ದೇಸಿತನಕ್ಕೆ ಮಾರ್ಪಾಟು ಮಾಡಿದ್ದಾರೆ. ಸುಣ್ಣ-ಬಣ್ಣ, ಅಲಂಕಾರ ಪ್ರತಿಯೊಂದರಲ್ಲೂ ರಾಸಾಯನಿಕ ಮುಕ್ತ ವಾತಾವರಣಕ್ಕೆ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಲಾಗಿದ್ದು, ಮಠದ ಸಂಪೂರ್ಣ ವಿದ್ಯುದೀಕರಣ ವ್ಯವಸ್ಥೆಯನ್ನು ಸೋಲಾರ್ ಸಿಸ್ಟಮ್​ಗೆ ಬದಲಾಯಿಸಲಾಗಿದೆ.

ಸುಮಾರು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್​ಗಳನ್ನು ಅಳವಡಿಸಲಾಗಿದೆ. ಮಠಕ್ಕೆ ಬೇಕಾದಷ್ಟು ವಿದ್ಯುತ್ ಸಂಪೂರ್ಣ ಬಳಕೆಯಾದ ನಂತರ ಮಿಕ್ಕಿದ ವಿದ್ಯುತ್ತನ್ನು ಮೆಸ್ಕಾಂಗೆ ಮಾರಾಟ ಮಾಡಲು ಕೃಷ್ಣ ಮಠ ಸಜ್ಜಾಗಿದೆ. ರಾಜಾಂಗಣದ ಮೇಲ್ಭಾಗದಲ್ಲಿ ಸೋಲಾರ್ ಪ್ಯಾನಲ್​ಗಳನ್ನು ಅಳವಡಿಸಲಾಗಿದೆ. ಪರಿಸರಕ್ಕೆ ಇದೊಂದು ಮಹತ್ವದ ಕೊಡುಗೆಯಾಗಲಿದೆ ಎಂದು ಅದಮಾರು ಮಠಾಧೀಶ ಈಶಪ್ರಿಯ ತೀರ್ಥರು ತಿಳಿಸಿದ್ದಾರೆ.

ಕೃಷ್ಣ ಮಠವನ್ನು ಸೋಲಾರ್ ಸಿಸ್ಟಮ್​ಗೆ ಬದಲಾಯಿಸಿದ ನಂತರ ಪ್ರತಿ ತಿಂಗಳು ಸುಮಾರು ಒಂದೂ ಕಾಲು ಲಕ್ಷ ರೂಪಾಯಿ ಉಳಿತಾಯವಾಗಲಿದೆ. ಉಳಿಕೆಯ ಹಣವನ್ನು ಭಕ್ತರ ವಿವಿಧ ಸೇವೆಗಳಿಗೆ ವಿನಿಯೋಗಿಸಲು ಮಠ ಚಿಂತನೆ ನಡೆಸಿದೆ. ಈಗಾಗಲೇ ಬಂದಿರುವ ಉಳಿತಾಯದ ಹಣದಲ್ಲಿ ಕೊರೊನಾ ಸಂದಿಗ್ಧತೆಯಿಂದ ಬಳಲುತ್ತಿರುವ ಆರೋಗ್ಯ ಇಲಾಖೆಗೆ ಸುಸಜ್ಜಿತ ಆ್ಯಂಬ್ಯುಲೆನ್ಸ್ ನೀಡಲು ಉಪಯೋಗಿಸಲಾಗಿದೆ ಎಂದು ಕೃಷ್ಣ ಮಠದ ಮೆನೇಜರ್ ಗೋವಿಂದರಾಜ್ ಹೇಳಿದ್ದಾರೆ.

ಸುಮಾರು ಐದು ವರ್ಷಗಳಲ್ಲಿ ತಗಲಿರುವ ವೆಚ್ಚದ ಸಂಪೂರ್ಣ ಹಣ ವಾಪಸ್ ಆಗುವ ಸಾಧ್ಯತೆ ಇದೆ. ಮುಂದಿನ ವರ್ಷಗಳಲ್ಲಿ ಮಠಕ್ಕೆ ವಿದ್ಯುತ್ ಸಂಪೂರ್ಣ ಉಚಿತವಾಗಿ ಲಭ್ಯವಾಗಲಿದ್ದು, ಕೃಷ್ಣ ಮಠದ ಚಿತ್ರಣವೇ ಬದಲಾಗಿದೆ. ಸದ್ಯ ನಾವು ಬಳಸುವ ಸಾಂಪ್ರದಾಯಕ ವಿದ್ಯುತ್ ವ್ಯವಸ್ಥೆಯಲ್ಲಿ ಕಲ್ಲಿದ್ದಲು ಅಥವಾ ಜಲವಿದ್ಯುತ್ ಘಟಕದಿಂದ ಉತ್ಪಾದನೆಯಾದ ವಿದ್ಯುತ್ ಅನ್ನು ಬಳಸುವುದು ಪದ್ಧತಿ. ಇದರಿಂದ ಪರಿಸರಕ್ಕೆ ಅಪಾರ ಹಾನಿಯಾಗುವ ಸಾಧ್ಯತೆಗಳಿರುವುದರಿಂದ ಸಂಪೂರ್ಣ ಸೋಲಾರ್ ಸಿಸ್ಟಮ್​ಗೆ ಕೃಷ್ಣ ಮಠವನ್ನು ಬದಲಾಯಿಸುವ ನಿರ್ಧಾರವನ್ನು ಸ್ವಾಮೀಜಿ ಕೈಗೊಂಡಿದ್ದಾರೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇದೊಂದು ಮಹತ್ವದ ನಿರ್ಧಾರವಾಗಿದೆ ಎಂದು ಕೃಷ್ಣ ಮಠದ ಮೆನೇಜರ್ ಗೋವಿಂದರಾಜ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರದ ಎರಡು ಘಟಕಗಳು ಕಾರ್ಯಾಚರಿಸುತ್ತಿದೆ. ಇದರಿಂದ ಪರಿಸರಕ್ಕೆ ಅಪಾರ ಪ್ರಮಾಣದ ಹಾನಿಯಾಗುತ್ತಿದ್ದು ಜನರು ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಬಳಕೆ ದೃಷ್ಟಿಯಿಂದ ಆತ್ಮ ನಿರ್ಭರವಾಗುವುದು ಕೃಷ್ಣ ಮಠದ ಉದ್ದೇಶ. ಸದ್ಯ ಈ ನಿರ್ಧಾರಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ

ಇದನ್ನೂ ಓದಿ:

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ.. ವಿವಾದ, ಗೊಂದಲ ಮತ್ತು ಸ್ಪಷ್ಟನೆ

ಹಡಿಲು ಭೂಮಿ ಕೃಷಿ ಪ್ರಕ್ರಿಯೆ ಉಡುಪಿಯಲ್ಲಿ ಮತ್ತೆ ಆರಂಭ; 2000 ಎಕರೆಯಲ್ಲಿ ಭತ್ತ ಭಿತ್ತನೆಗೆ ಸಿದ್ಧತೆ

Published On - 8:26 am, Sun, 20 June 21

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ