ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ

ಉಡುಪಿ: ಕಳೆದ ಒಂಬತ್ತು ದಿನಗಳಿಂದ ತೀವ್ರ ಉಸಿರಾಟ ಮತ್ತು ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಅವರ ಕೊನೆಯ ಆಸೆಯಂತೆ ಉಡುಪಿಯ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. ಇಂದು ಶ್ರೀಗಳ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಿಸದ ಕಾರಣ ಅವರನ್ನ ಪೊಲೀಸ್ ಬಿಗಿಭದ್ರತೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ […]

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ
ಸಾಧು ಶ್ರೀನಾಥ್​

Updated on: Dec 29, 2019 | 9:55 AM

ಉಡುಪಿ: ಕಳೆದ ಒಂಬತ್ತು ದಿನಗಳಿಂದ ತೀವ್ರ ಉಸಿರಾಟ ಮತ್ತು ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಅವರ ಕೊನೆಯ ಆಸೆಯಂತೆ ಉಡುಪಿಯ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಶ್ರೀಗಳ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಿಸದ ಕಾರಣ ಅವರನ್ನ ಪೊಲೀಸ್ ಬಿಗಿಭದ್ರತೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ ಮಠದ ಕೊಠಡಿಯೊಂದರಲ್ಲಿ ಆಸ್ಪತ್ರೆಯ ಮಾದರಿಯಲ್ಲಿ 6 ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ತಮ್ಮ ಭಕ್ತರನ್ನು, ಉಸಿರಾಗಿದ್ದ ಮಠವನ್ನ ಬಿಟ್ಟು ಕೊನೆಯುಸಿರೆಳೆದಿದ್ದಾರೆ.

Published On - 9:54 am, Sun, 29 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us