ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ 2026-27ನೇ ಸಾಲಿಗೆ ಆಡಿಯೋಲಜಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಆಪ್ಟೋಮೆಟ್ರಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 19 ರೊಳಗೆ ಉಡುಪಿ DHO ಕಚೇರಿಗೆ ಅರ್ಜಿ ಸಲ್ಲಿಸಬಹುದು. ಇದು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಇರುವವರಿಗೆ ಉತ್ತಮ ಅವಕಾಶವಾಗಿದೆ.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯು, ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ 2026-27ನೇ ಸಾಲಿಗೆ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಪರಿಶೀಲಿಸಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.
ಆಡಿಯೋಲಜಿಸ್ಟ್ / ಸ್ಪೀಚ್ ಥೆರಪಿಸ್ಟ್ ಹುದ್ದೆಯ ವಿವರ:
ಖಾಲಿಯಿರುವ 01 ಆಡಿಯೋಲಜಿಸ್ಟ್/ಸ್ಪೀಚ್ ಥೆರಪಿಸ್ಟ್ (Audiologist / Speech Therapist) ಹುದ್ದೆಗೆ RCI ನಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ Speech and Language Pathology ಯಲ್ಲಿ ಬ್ಯಾಚುಲರ್ ಡಿಗ್ರಿ (Bachelors Degree) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ವೇತನ ಸಿಗಲಿದೆ.
ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಯ ಅರ್ಹತೆ:
ಕ್ಲಿನಿಕಲ್ ಸೈಕಾಲಜಿಸ್ಟ್ (Clinical Psychologist) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ 01 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು RCI ನಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ Child Psychology ಯಲ್ಲಿ ಮಾಸ್ಟರ್ ಡಿಗ್ರಿ (Master’s Degree) ಪೂರ್ಣಗೊಳಿಸಿರಬೇಕು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ 2 ವರ್ಷಗಳ ಕಾರ್ಯಾನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಮಾಸಿಕ 25,000ರೂ. ವೇತನ ನಿಗದಿಪಡಿಸಲಾಗಿದೆ.
ಆಪ್ಟೋಮೆಟ್ರಿಸ್ಟ್ ಹುದ್ದೆಯ ವಿವರಗಳು:
ಆಪ್ಟೋಮೆಟ್ರಿಸ್ಟ್ (Optometrist) ವಿಭಾಗದಲ್ಲಿ 01 ಹುದ್ದೆ ಖಾಲಿಯಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Optometry ಯಲ್ಲಿ ಬ್ಯಾಚುಲರ್ ಅಥವಾ ಮಾಸ್ಟರ್ ಡಿಗ್ರಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ ಇರುವವರಿಗೆ ಮುಂಚೂಣಿ ಆದ್ಯತೆ ಇರಲಿದ್ದು, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 17,278 ರೂ. ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಕೊನೆಯ ದಿನಾಂಕ:
ಆಸಕ್ತರು ಅಧಿಕೃತ ವೆಬ್‌ಸೈಟ್ udupi.nic.in ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ಪ್ರಮಾಣಪತ್ರಗಳನ್ನು ಲಗತ್ತಿಸಿ, ದಿನಾಂಕ 19/09/2026 ರ ಸಂಜೆ 4:00 ಗಂಟೆಯೊಳಗೆ ‘ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಎನ್.ಹೆಚ್.ಎಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಅಜ್ಜರಕಾಡು, ಉಡುಪಿ’ ಇಲ್ಲಿಗೆ ನೇರವಾಗಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿಯು ಸಂಪೂರ್ಣವಾಗಿ ಜಿಲ್ಲಾ ಆರೋಗ್ಯ ಸಂಘ ಉಡುಪಿ ಇದರ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




