ಉಡುಪಿಯಲ್ಲೊಂದು ಹೇಯ ಕೃತ್ಯ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ ತಾಲೂಕಿನ ಮಲ್ಪೆಯಲ್ಲಿ ಮೀನು ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿಸಿ ಮತ್ತು ಎಸ್ಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಉಡುಪಿಯಲ್ಲೊಂದು ಹೇಯ ಕೃತ್ಯ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ
ಉಡುಪಿಯಲ್ಲೊಂದು ಹೇಯ ಕೃತ್ಯ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ
Edited By:

Updated on: Mar 19, 2025 | 7:46 PM

ಉಡುಪಿ, ಮಾರ್ಚ್​ 19: ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನ (woman) ಮರಕ್ಕೆ ಕಟ್ಟಿ ಹಾಕಿ ಹಲ್ಲೆ (attack) ಮಾಡಿರುವಂತಹ ಅಮಾನವೀಯ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ನಡೆದಿದೆ. ಸದ್ಯ ದುಷ್ಕೃತ್ಯ ಎಸಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೀನು ಕದ್ದ ಆರೋಪದ ಹಿನ್ನಲೆ ಮಹಿಳೆ ಕಪಾಳಕ್ಕೆ ಬಾರಿಸಿ ಅಮಾನವೀಯವಾಗಿ ವರ್ತಿಸಲಾಗಿದೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೀನು ಕದ್ದ ಆರೋಪದ ಮೇಲೆ ಲಕ್ಷ್ಮೀ ಬಾಯಿ ಎಂಬುವವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿದೆ. ಸದ್ಯ ಪೊಲೀಸರು ಸುಂದರ್‌, ಶಿಲ್ಪ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
ಲೈಟ್ ಫಿಶಿಂಗ್ ವಿರುದ್ಧ ಕಾರ್ಯಾಚರಣೆಗೆ ಇಳಿದ ಮೀನುಗಾರಿಕೆ ಇಲಾಖೆ
ನಿಗೂಢ ನಾಪತ್ತೆಯಾಗಿದ್ದ ಮಂಗಳೂರು ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ
ಸಮುದ್ರದ ಆಳದಲ್ಲಿ ಅಕ್ರಮ ಶಿಕಾರಿ: ನಿಷೇಧದ ನಡುವೆಯೂ ಮತ್ಸ್ಯ ಬೇಟೆ
ಉಡುಪಿಯಲ್ಲಿ ದುಬೈ ದೇಶದ ಕಾರುಗಳ ಓಡಾಟ: ಫೋಟೋಸ್​ ನೋಡಿ

ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕುಮಾರ್ ಹೇಳಿದ್ದಿಷ್ಟು 

ಘಟನೆ ಕುರಿತು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕುಮಾರ್​​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ವಿಜಯನಗರ ಜಿಲ್ಲೆಯಿಂದ ಬಂದಿರುವ ಮಹಿಳೆಯ ಮೇಲೆ ಸ್ಥಳೀಯ ಮಹಿಳೆಯರಿಂದ ಹಲ್ಲೆ ನಡೆದಿದೆ. ಮೀನು ಕದ್ದ ಆರೋಪದ ಮೇಲೆ ಲಕ್ಷ್ಮೀ ಬಾಯಿ ಎಂಬುವವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದರು.

ಇದನ್ನೂ ಓದಿ: TV9 ಸುದ್ದಿ ಪ್ರಸಾರ ಬೆನ್ನಲ್ಲೇ ಲೈಟ್ ಫಿಶಿಂಗ್ ವಿರುದ್ಧ ಕಾರ್ಯಾಚರಣೆಗೆ ಇಳಿದ ಮೀನುಗಾರಿಕೆ ಇಲಾಖೆ

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂದರ್‌, ಶಿಲ್ಪ ಹಾಗೂ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ವಿಡಿರೋ ಪರಿಶೀಲಿಸಿ ಇನ್ನಷ್ಟು ಆರೋಪಿಗಳನ್ನ ಶೀಘ್ರ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಯಾರು ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ: ಡಿಸಿ

ಇನ್ನು ಘಟನೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತೀವ್ರವಾಗಿ ಖಂಡಿಸಿದ್ದು, ಸಣ್ಣ ತಪ್ಪು ಮಾಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿರುವುದು ತಪ್ಪು. ಹಲ್ಲೆ ನಡೆಸುವವರು ಒಂದು ಕಡೆಯಾದರೆ, ಉಳಿದವರು ನಗುತ್ತ ನಿಂತಿದ್ದರು. ಯಾರು ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ. ಜನರ ಮನಸ್ಥಿತಿ ಈ ರೀತಿಯಾದರೆ ಕಷ್ಟ ಎಂದಿದ್ದಾರೆ.

ಇದನ್ನೂ ಓದಿ: ಸಮುದ್ರದ ಆಳದಲ್ಲಿ ಅಕ್ರಮ ಶಿಕಾರಿ: ನಿಷೇಧದ ನಡುವೆಯೂ ನಡೆಯುತ್ತಿದೆ ಮತ್ಸ್ಯ ಬೇಟೆ

ಯಾರಿಗೋ ಒಬ್ಬರಿಗೆ ಹಿಂಸೆಯಾಗುವಾಗ ನಾವು ನಗುವುದು ತಪ್ಪು. ನಾವು ಎತ್ತ ಸಾಗುತ್ತಿದ್ದೇವೆ ಅನ್ನೋ ಪ್ರಶ್ನೆ ಕಾಡುತ್ತೆ. ಈಗಾಗಲೇ ಉಡುಪಿ ಎಸ್​ಪಿಯವರಿಗೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ. ಇನ್ನೊಂದು ಬಾರಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು  ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಿಎಂ ಸೂಚನೆ

ಈ ವಿಚಾರವಾಗಿ ಸಿಎಂ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌
ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:02 pm, Wed, 19 March 25