ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿಯಾಗಿವೆ.

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ
ಬೋಟ್​​ನಲ್ಲಿ ಬೆಂಕಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಮೇಶ್ ಬಿ. ಜವಳಗೇರಾ

Updated on:Nov 13, 2023 | 2:44 PM

ಉಡುಪಿ, (ನವೆಂಬರ್ 13): ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್​​ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ(gangolli port)  ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆಮ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: ಉಡುಪಿ: ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ, ಹಂತಕನ ಬಂಧನಕ್ಕೆ 5 ತಂಡ ರಚನೆ

ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬೋಟುಗಳಿಗೆ ಅಗ್ನಿ ಅವಘಡ ಸಂಭವಿಸಿದೆ. ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೋಟ್ ಮೇಲೆ ಹಾಸಿದ್ದ ತೆಂಗಿನ ಗರಿಗಳಿಗೆ ಬೆಂಕಿ ತಗುಲಿದೆ. ಬಳಿಕ ಬೆಂಕಿ ಅಕ್ಕ-ಪಕ್ಕದಲ್ಲಿದ್ದ ಹಡಗುಗಳಿಗೆ ಬೆಂಕಿ ವ್ಯಾಪಿಸಿಕೊಂಡಿದೆ.

ಇನ್ನು ಇದಕ್ಕೆ ಮೀನುಗಾರರರು ಬಂದರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದು, ಬಂದರುಗಳನ್ನು ಸರಿಯಾಗಿ ಶುಚಿತ್ವ ಮಾಡದಿರುವುದೇ ಬೆಂಕಿ ಅವಘಡಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Mon, 13 November 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್