ಉಡುಪಿ, (ನವೆಂಬರ್ 13): ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ(gangolli port) ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆಮ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಉಡುಪಿ: ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ, ಹಂತಕನ ಬಂಧನಕ್ಕೆ 5 ತಂಡ ರಚನೆ
ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬೋಟುಗಳಿಗೆ ಅಗ್ನಿ ಅವಘಡ ಸಂಭವಿಸಿದೆ. ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೋಟ್ ಮೇಲೆ ಹಾಸಿದ್ದ ತೆಂಗಿನ ಗರಿಗಳಿಗೆ ಬೆಂಕಿ ತಗುಲಿದೆ. ಬಳಿಕ ಬೆಂಕಿ ಅಕ್ಕ-ಪಕ್ಕದಲ್ಲಿದ್ದ ಹಡಗುಗಳಿಗೆ ಬೆಂಕಿ ವ್ಯಾಪಿಸಿಕೊಂಡಿದೆ.
ಇನ್ನು ಇದಕ್ಕೆ ಮೀನುಗಾರರರು ಬಂದರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದು, ಬಂದರುಗಳನ್ನು ಸರಿಯಾಗಿ ಶುಚಿತ್ವ ಮಾಡದಿರುವುದೇ ಬೆಂಕಿ ಅವಘಡಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:30 am, Mon, 13 November 23