AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಅಯ್ಯೋ ವಿಧಿಯೇ..ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು

ಜೋಲಿ(ಜೋಕಾಲಿ)ಯಲ್ಲಿ ಆಟವಾಡಲು ಹೋದ ಬಾಲಕಿ ಕತ್ತಿಗೆಗೆ ಸೀರೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.

Udupi News: ಅಯ್ಯೋ ವಿಧಿಯೇ..ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು
ಮಾನ್ವಿ (9) ಮೃತ ಬಾಲಕಿ.
ರಮೇಶ್ ಬಿ. ಜವಳಗೇರಾ
|

Updated on:May 28, 2023 | 2:45 PM

Share

ಉಡುಪಿ: ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಉಡುಪಿ(udupi) ಜಿಲ್ಲೆಯ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಲಕ್ಷ್ಮಣ್‌ ಪೂಜಾರಿ ಎಂಬವರ ಮಗಳು ಮಾನ್ವಿ (9) ಮೃತ ಬಾಲಕಿ.

ಶುಕ್ರವಾರ ಸಂಜೆ 4 ಗಂಟೆಗೆ ಚಿಕ್ಕಪ್ಪನ ಮನೆ ಬಳಿ ಪಕ್ಕದ ಮನೆಯ ದೀಕ್ಷಾ ಎಂಬಾಕೆ ಜೊತೆ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಮಾನ್ವಿ ಕುತ್ತಿಗೆಗೆ ಸುತ್ತಿಕೊಂಡು ಈ ದುರ್ಘಟನೆ ನಡೆದಿದೆ. ತುರ್ತು ಚಿಕಿತ್ಸೆಗೆಂದು ನಿಟ್ಟೆಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಕೋಲಾರ: ಕುಡಿದ ಮತ್ತಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಖಾಸಗಿ ಸುದ್ದಿ ವಾಹಿನಿ ವಾಹನ ಚಾಲಕ ಮೃತಪಟ್ಟಿರುವ ಘಟನೆ ಕೋಲಾರ ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಹೆಬ್ಬಾಳ ಮೂಲದ ಖಾಸಗಿ ವಾಹಿನಿ ಚಾಲಕ ಶಿವಕುಮಾರ್ (35) ಮೃತ ದುರ್ವೈವಿ. ಕಳೆದ ರಾತ್ರಿ ಮೂವರು ಗೆಳೆಯರ ಜೊತೆ ಎಣ್ಣೆ ಪಾರ್ಟಿ ಮಾಡಿ, ಬೆಳಗಿನ ಜಾವ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದರು. ಆ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಮೃತ ಶಿವಕುಮಾರ್ ಸಾವಿನ ಬಗ್ಗೆ ಪೋಷಕರಿಂದ‌ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Published On - 2:14 pm, Sun, 28 May 23

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?