ಉಡುಪಿ: ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಉಡುಪಿ(udupi) ಜಿಲ್ಲೆಯ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಮೃತ ಬಾಲಕಿ.
ಶುಕ್ರವಾರ ಸಂಜೆ 4 ಗಂಟೆಗೆ ಚಿಕ್ಕಪ್ಪನ ಮನೆ ಬಳಿ ಪಕ್ಕದ ಮನೆಯ ದೀಕ್ಷಾ ಎಂಬಾಕೆ ಜೊತೆ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಮಾನ್ವಿ ಕುತ್ತಿಗೆಗೆ ಸುತ್ತಿಕೊಂಡು ಈ ದುರ್ಘಟನೆ ನಡೆದಿದೆ. ತುರ್ತು ಚಿಕಿತ್ಸೆಗೆಂದು ನಿಟ್ಟೆಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಕುಡಿದ ಮತ್ತಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಖಾಸಗಿ ಸುದ್ದಿ ವಾಹಿನಿ ವಾಹನ ಚಾಲಕ ಮೃತಪಟ್ಟಿರುವ ಘಟನೆ ಕೋಲಾರ ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ಹೆಬ್ಬಾಳ ಮೂಲದ ಖಾಸಗಿ ವಾಹಿನಿ ಚಾಲಕ ಶಿವಕುಮಾರ್ (35) ಮೃತ ದುರ್ವೈವಿ. ಕಳೆದ ರಾತ್ರಿ ಮೂವರು ಗೆಳೆಯರ ಜೊತೆ ಎಣ್ಣೆ ಪಾರ್ಟಿ ಮಾಡಿ, ಬೆಳಗಿನ ಜಾವ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದರು. ಆ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಮೃತ ಶಿವಕುಮಾರ್ ಸಾವಿನ ಬಗ್ಗೆ ಪೋಷಕರಿಂದ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Published On - 2:14 pm, Sun, 28 May 23