ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ಹತ್ಯೆ ಸಂಭ್ರಮಿಸಿದ ಹಿಂದೂ ಮಂತ್ರ ಪೇಜ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು
ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯನ್ನು ಸಂಭ್ರಮಿಸಿದ ಹಿಂದೂ ಮಂತ್ರ ಎಂಬ ಇನ್ಸ್ಟಾಗ್ರಾಮ್ ಪೇಜ್ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಪೋಸ್ಟ್ನಲ್ಲಿ ಶೀರ್ಷಿಕೆ ಬರೆಯಲಾಗಿದೆ.
ಉಡುಪಿ, ನ.17: ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ಬರೆದಿದ್ದಾನೆ ಎಂದು ಶೀರ್ಷಿಕೆಯಡಿ ಪೋಸ್ಟ್ ಹಂಚಿಕೊಂಡು ನಾಲ್ವರ ಹತ್ಯೆಯನ್ನು (Murder) ಸಂಭವಿಸಿದ ಹಿಂದೂ ಮಂತ್ರ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆ ವಿರುದ್ಧ ಉಡುಪಿಯ (Udupi) ಸೆನ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ನಲ್ಲಿ, 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ.
ಇದನ್ನೂ ಓದಿ: ಉಡುಪಿಯಲ್ಲಿ ನಾಲ್ವರ ಭೀಕರ ಕೊಲೆ; ಹಂತಕನ ಜಾಡು ಹಿಡಿದಿದ್ದು ಹೇಗೆ ಗೊತ್ತಾ?
ಅಲ್ಲದೆ, ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟದ ಎಮೋಜಿ ತೊಡಿಸಲಾಗಿದೆ. ಇದರೊಂದಿಗೆ, ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರು ಕೂಡ ಬರಲಿಲ್ಲ. ಹೀಗಾಗಿ ನಾವು ಕೂಡ ಈ ವಿಚಾರಕ್ಕೆ ಬರುವುದಿಲ್ಲ ಎಂದು ಬರೆಯಲಾಗಿದೆ.
ಖಾಸಗಿ ಕಾಲೇಜೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದಾಗ ಮುಸ್ಲಿಂ ವಿದ್ಯಾರ್ಥಿನಿಯರು ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆ ವಿಡಿಯೋಗಳನ್ನು ತಮ್ಮ ಸುಮದಾಯದ ಯುವರಿಗೆ ಶೇರ್ ಮಾಡಿದ್ದ ಆರೋಪ ಕೂಡ ಕೇಳಿಬಂದಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ