AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಯುವಕ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 05, 2023 | 2:37 PM

Share

ಉಡುಪಿ, ಸೆ.05: ರಾಷ್ಟ್ರಮಟ್ಟದ ಬಾಕ್ಸಿಂಗ್ (Boxing) ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ (Udupi) ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮಗು ಅಳಬಾರದೆಂದು ಮೂಗು, ಬಾಯಿ ಮುಚ್ಚಿ‌ದ ತಂದೆ; ಉಸಿರುಗಟ್ಟಿ 14 ತಿಂಗಳ ಹಸುಗೂಸು‌ ಸಾವು

ರಾಯಚೂರು: ಕೆಲವೊಮ್ಮೆ ನಮಗೆ ಗೊತ್ತಿದ್ದೂ, ಗೊತ್ತಲ್ಲದೆಯೋ ಕೆಲವೊಂದು ಅವಘಡ ನಡೆಯುತ್ತದೆ. ಅದರಂತೆ ಇದೀಗ ಪತ್ನಿ ಜೊತೆ ಜಗಳವಾಡಿದ ಪತಿ, ಮಗುವನ್ನು ಕರೆದೊಯ್ಯುವಾಗ, ಮಗು ಅಳಲು ಪ್ರಾರಂಭಿಸಿದೆ. ಇದರಿಂದ ಮೂಗು, ಬಾಯಿ ಮುಚ್ಚಿ‌ 14 ತಿಂಗಳ ಹಸುಗೂಸನ್ನು ಕರೆದೊಯ್ಯುವ ವೇಳೆ ಉಸಿರು ಗಟ್ಟಿ ಮಗು ಕೊನೆಯುಸಿರೆಳೆದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ. ಅಭಿನವ, ಮೃತ 14 ತಿಂಗಳ ಹಸುಗೂಸು.

ಇದನ್ನೂ ಓದಿ:ಚನ್ನಪಟ್ಟಣ: ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ ಸಾಲದ ಏಜೆಂಟ್, ನೊಂದ ಪತಿ ಆತ್ಮಹತ್ಯೆಗೆ ಶರಣು

ಇನ್ನು ಕೊಲೆ ಆರೋಪದಡಿ ತಂದೆ ಮಹಾಂತೇಶ್​ನ್ನು ಮುದಗಲ್ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಜೊತೆ ಜಗಳವಾಡಿದ್ದ ಪತಿ ಮಹಾಂತೇಶ್. ಈ ಹಿನ್ನಲೆ ಇತ್ತೀಚೆಗೆ ಮಗು ಜೊತೆ ಪತ್ನಿ ತವರು ಮನೆ ಕನಸಾವಿ ಗ್ರಾಮಕ್ಕೆ ಹೋಗಿದ್ದಳು. ಬಾಗಲಕೋಟೆಯ ಇಳಕಲ್‌ನಿಂದ ಪತ್ನಿ ಊರಿಗೆ ಹೋಗಿದ್ದ ಪತಿ, ಈ ವೇಳೆ ಪತ್ನಿ ಜೊತೆ ಮತ್ತೆ ಜಗಳವಾಡಿ, ಮಗುವನ್ನು ಊರಿಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಅಳುತ್ತಿದ್ದ ಮಗುವಿನ ಬಾಯಿ, ಮೂಗನ್ನು ಮುಚ್ಚಿದ್ದಾಗ ಈ ದುರ್ಘಟನೆ ನಡೆದಿದೆ. ನಂತರ ಮಗು ಮೃತಪಟ್ಟ ಭಯದಲ್ಲಿ ಕಲ್ಲುಗಳ ಒಳಗೆ ಮಗು ಶವವಿಟ್ಟು ಆರೋಪಿ ತಂದೆ ಹೋಗಿದ್ದನು. ನಿನ್ನೆ ರಾತ್ರಿ ಘಟನೆ ಬೆಳಕಿಗೆ ಬಂದ ಹಿನ್ನಲೆ ಇಂದು(ಸೆ.05) ಆರೋಪಿ ಮಹಾಂತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್