ಮಣಿಪಾಲದ ಹೆರ್ಗದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಮಣಿಪಾಲದ ಹೆರ್ಗದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಶ್ರೀನಿಧಿ ಶೆಟ್ಟಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 09, 2024 | 10:43 PM

ಉಡುಪಿ, ಜು.09: ಮಣಿಪಾಲ(Manipal)ದ ಹೆರ್ಗದಲ್ಲಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನು ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್​ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ:ಆ ಒಂದು ಕಾರಣಕ್ಕೆ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡ್ರಾ? ಅಸಲಿಗೆ ನಡೆದಿದ್ದೇನು? ಎಸ್ಪಿ ಹೇಳಿದ್ದಿಷ್ಟು

ರಸ್ತೆ‌ ಬದಿ ನಿಂತಿರುವ ಆಟೋಗೆ ಬಸ್ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಯಾದಗಿರಿ: ಯರಗೋಳ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬಸ್​ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳನ್ನ ಯಾದಗಿರಿ ಯಿಮ್ಸ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಕಲಬುರಗಿಯಿಂದ ಯಾದಗಿರಿ ಕಡೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ