ಉಡುಪಿ, ಜು.09: ಮಣಿಪಾಲ(Manipal)ದ ಹೆರ್ಗದಲ್ಲಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇನ್ನು ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಇದನ್ನೂ ಓದಿ:ಆ ಒಂದು ಕಾರಣಕ್ಕೆ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡ್ರಾ? ಅಸಲಿಗೆ ನಡೆದಿದ್ದೇನು? ಎಸ್ಪಿ ಹೇಳಿದ್ದಿಷ್ಟು
ಯಾದಗಿರಿ: ಯರಗೋಳ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳನ್ನ ಯಾದಗಿರಿ ಯಿಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಕಲಬುರಗಿಯಿಂದ ಯಾದಗಿರಿ ಕಡೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ