ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರು!

ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರು!
ಹಿಜಾಬ್ ಧರಿಸಿರುವ ಉಡುಪಿ ಕಾಲೇಜು ವಿದ್ಯಾರ್ಥಿನಿಯರು (ಸಂಗ್ರಹ ಚಿತ್ರ)

ಹಿಜಾಬ್ ಧರಿಸಿ ಅವಕಾಶ ನೀಡಿ ಅಂತ ಮನವಿ ಮಾಡಿದ್ದರು. ಆದರೆ ಅವಕಾಶ ಸಿಗದೆ ಹಿನ್ನೆಲೆ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು. ಇಂದು ಕೂಡಾ ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.

TV9kannada Web Team

| Edited By: sandhya thejappa

Apr 23, 2022 | 11:22 AM

ಉಡುಪಿ: ಶಾಲಾ- ಕಾಲೇಜುಗಳಿಗೆ ಹಿಜಾಬ್ (Hijab) ಧರಿಸದಂತೆ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ. ಶಿಕ್ಷಣ ಇಲಾಖೆ ಕೂಡಾ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ತಿಳಿಸಿದೆ. ಹೀಗಿದ್ದೂ, ನಿನ್ನೆ ​ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಅಂತ ಮನವಿ ಮಾಡಿದ್ದರು. ಆದರೆ ಅವಕಾಶ ಸಿಗದೆ ಹಿನ್ನೆಲೆ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು. ಇಂದು ಕೂಡಾ ಹಿಜಾಬ್ ಹಕ್ಕಿಗಾಗಿ ಹೈಕೋರ್ಟ್ ಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.

ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ. ಆದರೆ ಹಿಜಾಬ್ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿಲ್ಲ. ಅಲ್ಮಾಸ್, ಹಜ್ರಾ, ಆಯೇಷಾ ಪರೀಕ್ಷೆಗೆ ಗೈರಾಗಿದ್ದಾರೆ. ಅಲ್ಮಾಸ್ ಹಾಲ್ ಟಿಕೆಟ್ ಪಡೆದು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನು ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆಯುವುದಕ್ಕೂ ಬಂದಿಲ್ಲ.

ನಿನ್ನೆ ಹಿಜಾಬ್ ಧರಿಸಿ ಬಂದಿದ್ದಕ್ಕೆ ಅಲಿಯಾ, ರೇಷಂಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ. ಈ ಇಬ್ಬರು ವಿದ್ಯಾರ್ಥಿನಿಯರು ಭಾರಿ ಟೀಕೆಗೆ ಒಳಗಾಗಿದ್ದಾರೆ. ಹೀಗಾಗಿ ತಾವು ಕೂಡ ಪರೀಕ್ಷಾ ಕೇಂದ್ರಕ್ಕೆ ಹೋದರೆ ಟೀಕೆಗೆ ಒಳಗಾಗಬಹುದೆಂಬ ಭೀತಿಯಿಂದ ಗೈರಾಗಿದ್ದಾರಾ ಎಂಬ ಅನುಮಾನ ಮೂಡಿದೆ.

ರಘುಪತಿ ಭಟ್ ನಮಗೆ ಬೆದರಿಕೆ ಹಾಕಿದ್ದಾರೆ- ಆಲಿಯಾ ಅಸಾದಿ ಟ್ವೀಟ್: ನಿನ್ನೆ ಪರೀಕ್ಷೆಗೆ ಗೈರಾಗಿದ್ದ ಆಲಿಯಾ ಅಸಾದಿ ಟ್ವೀಟ್ ಮಾಡಿದ್ದಾಳೆ. ನನಗೆ, ರೇಷಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಇದರಿಂದ ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ. ಬಿಜೆಪಿ ಶಾಸಕ ರಘುಪತಿ ಭಟ್ ನಮಗೆ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್, ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸ್ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ. ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಆಲಿಯಾ ಅಸಾದಿ ಟ್ವೀಟ್ ಮಾಡಿದ್ದಾಳೆ.

ಇದನ್ನೂ ಓದಿ

ಪಿಎಸ್​ಐ ನೇಮಕಾತಿ ಅಕ್ರಮದ ತನಿಖೆ ಚುರುಕುಗೊಳಿಸಿದ ಸಿಐಡಿ; ಒಎಂಆರ್​ ಶೀಟ್​​ಗಳನ್ನು ಎಫ್​ಎಸ್​ಎಲ್​ಗೆ ಕಳಿಸಲು ಸಿದ್ಧತೆ

ಹಾಲು ಒಕ್ಕೂಟ ನೇಮಕಾತಿಗೆ 25 ಲಕ್ಷ, ಕೆಪಿಎಸ್​ಸಿ ನೇಮಕಾತಿ 1 ಕೋಟಿ: ಎಚ್​ಡಿಕೆ ಗಂಭೀರ ಆರೋಪ

Follow us on

Related Stories

Most Read Stories

Click on your DTH Provider to Add TV9 Kannada