ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಇನ್ನೇನು ಕಾಲೇಜಿ ಮೆಟ್ಟಿಲೇರಬೇಕಿತ್ತು. ಆದ್ರೆ, ದುರ್ವೈವ ಅಂದರೆ ಹೆಡ್ ಮಾಸ್ಟರ್ ಟಿಸಿ ಕೊಡಲಿಲ್ಲವೆಂದು ವಿದ್ಯಾರ್ಥಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.
ಉಡುಪಿ, (ಮೇ 20): ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್ಎಸ್ಎಲ್ಸಿಯಲ್ಲಿ(SSLC) ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ (Udupi) ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಟಿಸಿ ಕೊಟ್ಟಿಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್‌ಎಸ್‌ಎಲ್‌ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ: ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಕುರಿಗಾಯಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಚಂದಪ್ಪ(55) ಮೃತ ಕುರಿಗಾಯಿ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.