ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಇನ್ನೇನು ಕಾಲೇಜಿ ಮೆಟ್ಟಿಲೇರಬೇಕಿತ್ತು. ಆದ್ರೆ, ದುರ್ವೈವ ಅಂದರೆ ಹೆಡ್​ ಮಾಸ್ಟರ್​ ಟಿಸಿ ಕೊಡಲಿಲ್ಲವೆಂದು ವಿದ್ಯಾರ್ಥಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ನಿತಿನ್ ಆಚಾರಿ
Edited By:

Updated on: May 20, 2024 | 11:03 PM

ಉಡುಪಿ, (ಮೇ 20): ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್​​ಎಸ್​ಎಲ್​ಸಿಯಲ್ಲಿ(SSLC) ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ (Suicide)  ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ (Udupi) ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಟಿಸಿ ಕೊಟ್ಟಿಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಕುರಿಗಾಯಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಚಂದಪ್ಪ(55) ಮೃತ ಕುರಿಗಾಯಿ.  ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us