AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಎನ್​ಕೌಂಟರ್ ನಡೆದ ಪೀತಬೈಲ್​ನಲ್ಲಿ ತೀವ್ರ ಶೋಧ, ಶರಣಾಗತಿಗೆ ನಕ್ಸಲರಿಗೆ ಡಿಸಿಎಂ ಸೂಚನೆ

ನಕ್ಸಲ್ ವಿಕ್ರಂ ಗೌಡ ಎನ್​ಕೌಂಟರ್ ನಡೆದ ಪ್ರದೇಶದಲ್ಲಿ ಕೂಂಬಿಂಗ್ ಮುಂದುವರೆದಿದೆ. ಪರಾರಿಯಾಗಿರುವ ನಕ್ಸಲರಿಗಾಗಿ ಶೋಧ ತೀವ್ರಗೊಂಡಿದೆ. ಈ ನಡುವೆ ಬೆಂಗಳೂರಿನ ಎಫ್​​ಎಸ್​​ಎಲ್ ಟೀಂ ಎನ್​​ಕೌಂಟರ್ ನಡೆದ ಪೀತಬೈಲ್ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಕಲೆ ಹಾಕುತ್ತಿದೆ. ಈ ನಡುವೆ, ನಕ್ಸಲರು ಶರಣಾಗುವಂತೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಉಡುಪಿ: ಎನ್​ಕೌಂಟರ್ ನಡೆದ ಪೀತಬೈಲ್​ನಲ್ಲಿ ತೀವ್ರ ಶೋಧ, ಶರಣಾಗತಿಗೆ ನಕ್ಸಲರಿಗೆ ಡಿಸಿಎಂ ಸೂಚನೆ
ಪೀತಬೈಲ್ ಬಳಿ ಅರಣ್ಯದಲ್ಲಿ ಎಎನ್​ಎಫ್​ ಸಿಬ್ಬಂದಿಯ ವಾಹನ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 22, 2024 | 7:44 AM

Share

ಉಡುಪಿ, ನವೆಂಬರ್ 22: ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ನಕ್ಸಲ್ ನಿಗ್ರಹ ಪಡೆ ಗುಂಡಿಗೆ ಬಲಿಯಾದ ಸಂಸದರ್ಭದಲ್ಲಿ ಆತನ ಜತೆ ಇದ್ದ ಇತರೆ ನಕ್ಸಲರು ಪರಾರಿಯಾಗಿದ್ದರು. ಪರಾರಿಯಾದವರಿಗಾಗಿ ಕರಾವಳಿಯ ಪಶ್ಚಿಮ ಘಟ್ಟದ ದಟ್ಟ ಕಾಡಿನಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ವಿಕ್ರಂ ಗೌಡ ಎನ್​ಕೌಂಟರ್ ನಡೆದ ಜಾಗಕ್ಕೆ ಬೆಂಗಳೂರಿನ ಎಫ್​​ಎಸ್​​ಎಲ್ ತಂಡ ಭೇಟಿ ನೀಡಿದೆ.

ವಿಕ್ರಂ ಗೌಡ ಜತೆಗೆ ಬಂದಿದ್ದ ಇತರ ನಕ್ಸಲರು ಪರಾರಿಯಾಗಿರುವುದು ಪೀತಬೈಲ್ ಸೇರಿದಂತೆ ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಎಎನ್​ಎಫ್ ಕೂಂಬಿಂಗ್ ತೀವ್ರಗೊಳಿಸಿದೆ. ತಪ್ಪಿಸಿಕೊಂಡ ನಕ್ಸಲರ ಜಾಡು ಹಿಡಿದು ಶೋಧ ಕಾರ್ಯ ನಡೆಯುತ್ತಿದೆ. ಹಿರಿಯ ಎಎನ್​ಎಫ್ ಅಧಿಕಾರಿಗಳು ಕಬ್ಬಿನಾಲೆ, ಪೀತಬೈಲ್, ನಾಡಪಾಲ್, ಕೂಡ್ಲು ಅರಣ್ಯವ್ಯಾಪ್ತಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಡಿಗೆ ಹೋಗದಂತೆ ಸ್ಥಳೀಯ ನಿವಾಸಿಗಳಿಗೆ ಸೂಚಿಸಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದ ರೀತಿಯಲ್ಲಿದೆ.

ಕಬ್ಬಿನಾಲೆ ಅರಣ್ಯ ವ್ಯಾಪ್ತಿಗೆ ಪ್ರವೇಶಿಸುವ ಮುನ್ನ ನಕ್ಸಲರು ಉಡುಪಿ ಜಿಲ್ಲೆಯ ಈದು ಗ್ರಾಮ ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲುರು ಮಲೆ ಪ್ರದೇಶ, ಕೊಡುಗು ದಕ್ಷಿಣ ಕನ್ನಡ ಗಡಿ ಪ್ರದೇಶದಲ್ಲಿ ಪ್ರತ್ಯಕ್ಷಗೊಂಡಿದ್ದರು. ಈ ಕಾರಣದಿಂದಾಗಿ ಈ ಭಾಗದ ಕಾಡುಗಳನ್ನೂ ಎಎನ್​ಎಫ್ ಅಧಿಕಾರಿಗಳು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಕ್ಸಲ್ ಚಲನವಲನದ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ. ಈ ನಡುವೆ ನಕ್ಸಲರ ಶರಣಾಗತಿಗೂ ಸೂಚನೆ ನೀಡಲಾಗಿದೆ. ಶರಣಾಗದೆ ಹೋದರೆ ಕರಾವಳಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಮರುಕಳಿಸುವ ಸಾಧ್ಯತೆ ಇದೆ. ಸರಕಾರ ಕೂಡ ನಕ್ಸಲರ ಶರಣಾಗತಿಗೆ ಸೂಚನೆ ನೀಡಿದೆ.

ಗುರುವಾರ ಕೊಲ್ಲೂರಿಗೆ ಭೇಟಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ನಕ್ಸಲ್ ವಿಕ್ರಂ ಗೌಡ ಎನ್​​ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಜನರನ್ನ ರಕ್ಷಣೆ ಮಾಡುವುದು ನಮ್ಮ ಕೆಲಸವಾಗಿದೆ. ಕೇರಳ, ಕರ್ನಾಟಕದಲ್ಲಿ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಎಲ್ಲಾ ಮಾಹಿತಿಗಳನ್ನೂ ಸಾರ್ವಜನಿಕವಾಗಿ ಹಂಚಿಕೊಂಡಾಗಿದೆ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ ಎಂದು ಗೃಹ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ನಕ್ಸಲ್​ ವಿಕ್ರಂಗೌಡ ಎನ್​ಕೌಂಟರ್​ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಜಿಪಿ ಪ್ರಣಬ್ ಮೊಹಂತಿ

ಒಟ್ಟಿನಲ್ಲಿ, ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ನಕ್ಸಲ್ ಎನ್​ಕೌಂಟರ್ ಮುಗಿದ ಅಧ್ಯಾಯವಲ್ಲ. ಸದ್ಯ ಕಾರ್ಯಚರಣೆ ಇನ್ನಷ್ಟು ತೀವ್ರಗೊಂಡಿದೆ. ಪಶ್ಚಿಮ ಘಟ್ಟದ ತಪ್ಪಲು ಮುಂದೆ ಯಾವ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್