AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದ ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮಗುವಿಗೆ ಉಡುಪಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿಯಲ್ಲಿ ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ
ಮಗುವಿನ ಮೈ ಮೇಲಿನ ಗಾಯದ ಗುರುತು
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on: Sep 14, 2024 | 1:43 PM

Share

ಉಡುಪಿ, ಸೆಪ್ಟೆಂಬರ್​ 14: ಹೆಬ್ರಿ (Hebri) ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮೂರು ವರ್ಷದ ಪ್ರೇರಿತ್‌ ಹಲ್ಲೆ ಮಾಡಲಾಗಿದೆ. ಮೈ ಹುಷಾರಿಲ್ಲ ಅಂತ ಪ್ರೇರಿತ್​ನನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ (Udupi) ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್​ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್​​ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್​ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

ಇನ್ನು, ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್​ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ.

ಮಗುವಿನ ಮೇಲೆ ಗಂಭೀರವಾಗಿ ಹಲ್ಲೆ: ಮಕ್ಕಳ ರಕ್ಷಣಾಧಿಕಾರಿ ನಾಗರತ್ನ

ಪ್ರಕರಣ ಸಂಬಂಧ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಗವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!