ಸುಹಾಸ್ ಶೆಟ್ಟಿ ಹತ್ಯೆ ಕೇಸ್​​ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸದ್ಯ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಜೊತೆಗೆ ಮಂಗಳೂರು ಹೊರವಲಯದ ಕಣ್ಣೂರಿನಲ್ಲಿ ಮತ್ತೊಂದು ಅಟ್ಯಾಕ್ ನಡೆದಿದ್ದು, ಯುವಕನಿಗೆ ಚಾಕು ಇರಿಯಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಕೇಸ್​​ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
ಪ್ರಾತಿನಿಧಿಕ ಚಿತ್ರ

Updated on: May 02, 2025 | 2:35 PM

ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್​, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ (muslim boy) ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ ಹಿರಿಯಡಕ ಠಾಣೆ ಪೊಲೀಸರಿಂದ ಇಬ್ಬರನ್ನು ಬಂಧಿಸಲಾಗಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು 

ಸುಶಾಂತ್, ಸಂದೇಶ್ ಪೂಜಾರಿ ಬಂಧಿತರು. ನಿನ್ನೆ ರಾತ್ರಿ ಆಟೋ ಚಾಲಕ ಅಬೂಬಕ್ಕರ್​ನನ್ನು ಅಡ್ಡಕಟ್ಟಿದ ಸುಶಾಂತ್ ಮತ್ತು ಸಂದೇಶ್ ಪೂಜಾರಿ ತಲ್ವಾರ್, ಬಾಟಲ್​ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ಅಬೂಬ್ಬಕ್ಕರ್​​ ತಪ್ಪಿಸಿಕೊಂಡು ಹೋಗಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿದ್ದಿಷ್ಟು 

ತಕ್ಷಣ ಎಚ್ಚೆತ್ತುಕೊಂಡ ಹಿರಿಯಡಕ ಠಾಣೆ ಪೊಲೀಸರು ಸುಶಾಂತ್, ಸಂದೇಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆಗೆ ಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ

ಕೋರ್ಟ್​ಗೆ ಹಾಜರು

ಸುಹಾಸ್ ಹತ್ಯೆ ಪ್ರತೀಕಾರವಾಗಿ ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸುಶಾಂತ್, ಸಂದೇಶ್ ಪೂಜಾರಿ ಅನ್ನು ಹಿರಿಯಡ್ಕ ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ಅಟ್ಯಾಕ್: ಯುವಕನಿಗೆ ಚಾಕು ಇರಿತ

ಇನ್ನು ಮಂಗಳೂರು ಹೊರವಲಯದ ಕಣ್ಣೂರಿನಲ್ಲಿ ಮತ್ತೊಂದು ಅಟ್ಯಾಕ್ ನಡೆದಿದ್ದು, ಮುಂಜಾನೆ 3 ಗಂಟೆಗೆ ಐವರು ದುಷ್ಕರ್ಮಿಗಳಿಂದ ಯುವಕ ಮೇಲೆ ದಾಳಿ ಮಾಡಿ ಚಾಕು ಇರಿಯಲಾಗಿದೆ. ಇರ್ಶಾದ್ ಚಾಕು ಇರಿತಕ್ಕೊಳಗಾದ ಯುವಕ.

ಇದನ್ನೂ ಓದಿ: ನೆಟ್ಟಾರು ಕೊಲೆ ಪ್ರತಿಕಾರಕ್ಕೆ ಫಾಜಿಲ್​ ಹತ್ಯೆ: ಇದೇ ಸೇಡಿಗೆ ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಇರ್ಶಾದ್​ ಮಂಗಳೂರು ಮಾರುಕಟ್ಟೆಗೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಐವರು ದುಷ್ಕರ್ಮಿಗಳಿಂದ ಕೃತ್ಯವೆಸಲಾಗಿದೆ. ಈ ವೇಳೆ ಮನೆಯೊಂದಕ್ಕೆ ಓಡಿಹೋಗಿ ಜೀವ ಉಳಿಸಿಕೊಂಡಿದ್ದಾನೆ. ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಇರ್ಶಾದ್​ಗೆ ಚಿಕಿತ್ಸೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:16 am, Fri, 2 May 25