Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ

ಅಯೋಧ್ಯೆಯ ರಾಮ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ
ಅಯೋಧ್ಯೆಯ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ
Follow us
|

Updated on:Mar 17, 2023 | 7:36 PM

ಉಡುಪಿ: ಅಯೋಧ್ಯೆಯ ರಾಮ (Ayodhya Ram) ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಟ್ವೀಟ್‌ ಮೂಲಕ ಶುಕ್ರವಾರ ತಿಳಿಸಿದ್ದಾರೆ. ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಯನ್ನು ಆಯ್ಕೆ ಮಾಡಲಾಗಿದೆ. ಸಂಪೂರ್ಣ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ. ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್​​​ ರಾಯ್​ ಅವರು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಗರ್ಭ ಗುಡಿಯ ಚಿತ್ರವನ್ನು ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ.

2023ರ ಡಿಸೆಂಬರ್ ಒಳಗೆ ಗರ್ಭಗುಡಿ ನಿರ್ಮಾಣ

ರಾಮಮಂದಿರ ನಿರ್ಮಾಣ ಕಾರ್ಯವನ್ನು ಈಗ ವೇಗವಾಗಿ ಮಾಡಲಾಗುತ್ತಿದೆ. 2023ರ ಡಿಸೆಂಬರ್ ತಿಂಗಳೊಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಕಿಕೊಂಡಿದೆ. ಗರ್ಭಗುಡಿಯಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಲಾಗುತ್ತೆ. ಬಳಿಕ ಗರ್ಭಗುಡಿಯ ದರ್ಶನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗುತ್ತೆ. ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ್ನು ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದು, ಈ ಟ್ರಸ್ಟ್ ಈಗ ಮಂದಿರ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 1300 ಕೋಟಿ ವೆಚ್ಚದ ಅಂದಾಜು: ನೀಲಿ ಛಾಯೆಯ ಶ್ವೇತ ಶಿಲೆಯಲ್ಲಿ ಕಂಗೊಳಿಸಲಿದ್ದಾನೆ ಶ್ರೀರಾಮ

ಚಂಪತ್ ರಾಯ್ ಅವರು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯಾಗಿದ್ದು, ನಿತ್ಯ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹಾಗೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 2023ರ ಡಿಸೆಂಬರ್​ನೊಳಗಾಗಿ ಗರ್ಭಗುಡಿ ನಿರ್ಮಾಣ ಕಾರ್ಯ ಪೂರ್ಣಗೊಳಲಿದೆ.

2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ

2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಆಗಲಿದೆ ಎಂದು ಇತ್ತೀಚೆಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ರಾಮಮಂದಿರ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿಗಳ ಆಶಯದಂತೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಸಂಶೋಧನೆ ಮಾಡುತ್ತಿದ್ದಾರೆ. ರಾಮನವಮಿ ದಿನ ಅಯೋಧ್ಯೆಯ ರಾಮ ಮಂದಿರ ಶ್ರೀರಾಮನ ಮೂರ್ತಿಯ ಮೇಲೆ ತಿಲಕದ ರೀತಿಯಲ್ಲಿ ಸೂರ್ಯ‌ನ ಕಿರಣಗಳು ಬಿಳುವಂತೆ ಮಂದಿರ ನಿರ್ಮಾಣದ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Ayodhya Ram Temple ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭ; ಮೂರು ಅಂತಸ್ತಿನ ಕಟ್ಟಡದ ವೆಚ್ಚ ಸುಮಾರು ₹1,800 ಕೋಟಿ

400 ಕೋಟಿ ರೂ. ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ

ರಾಮಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜಿಎಸ್​ಟಿ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ತಗಲಬಹುದೆಂದು ಅಂದಾಜಿಸಲಾಗಿ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಅಯೋಧ್ಯ ರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಾಣಕ್ಕೆ ಸಮಿತಿ ನಿರ್ಣಯಿಸಿದೆ. ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪನೆಗೆ ತೀರ್ಮಾನ ಮಾಡಲಾಗಿದೆ. ಮಂದಿರ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ ಸಾಧ್ಯತೆಯಿದ್ದು, ಮಂದಿರ ನಿರ್ಮಾಣಕ್ಕೆ ದೇಣಿಗೆಯ ಮಹಾಪೂರವೇ ಹರಿದು ಬಂದಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:10 pm, Fri, 17 March 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ