ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ GKVK ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಮೃತರು. ಒಟ್ಟು 68 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ.
ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿದ್ದಾರೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಮೃತರು. ಒಟ್ಟು 68 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ ಹೆಸರೂ ಸತೀಶ್ (21) ಎಂದಿದ್ದು, ಆತನಿಗಾಗಿ ಶೋಧ ನಡೆದಿದೆ.
ಡಿ.ಕೆ. ಶಿವಕುಮಾರ್ಗೆ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ ಮಂಗಳೂರು: ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ಗೆ ನಿಂದಿಸಿದ್ದ ಆರೋಪ ಹೊತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಏನಿದು ಪ್ರಕರಣ?: 2016ರಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆ ಶಿವಕುಮಾರ್ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ದ ಡಿಕೆ ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು.
Also Read: ಮಸೀದಿಯ 100 ಮೀ ಸುತ್ತಮುತ್ತ ಹನುಮಾನ್ ಚಾಲೀಸಾ ಪಠಣಕ್ಕೆ ಅವಕಾಶ ಕೊಡಲ್ಲ ಎಂದ ಮಹಾರಾಷ್ಟ್ರ ಪೊಲೀಸರು! ಮುಂದೇನು?
Published On - 4:15 pm, Mon, 18 April 22