Udupi News: ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು, ನೀರಿಗೆ ಬೀಳುತ್ತಿರುವ ದೃಶ್ಯ ಗೆಳೆಯನ ಮೊಬೈಲ್​ನಲ್ಲಿ ಸೆರೆ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಹೌದು..ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

Follow us
H P
| Updated By: ರಮೇಶ್ ಬಿ. ಜವಳಗೇರಾ

Updated on:Jul 24, 2023 | 11:14 AM

ಉಡುಪಿ, (ಜುಲೈ 24): ಕರ್ನಾಟಕದ ವಿವಿಧ ಭಾಗಗಳ ಭಾರೀ ಮಳೆಯಾಗುತ್ತಿದ್ದು (rain), ನದಿ-ಹಳ್ಳಗಳು ತುಂಬಿಹರಿಯುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ ಮಾಡಿವೆ. ಅದ್ಯಾವುದಕ್ಕೂ ಕ್ಯಾರೇ ಎನ್ನದ ಯುವಕನೋರ್ವ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಹೌದು…ರೀಲ್ಸ್ (Reels) ಮಾಡಲು ಹೋಗಿ ಜಾರಿ ಜಲಪಾತಕ್ಕೆ (Water Falls) ಬಿದ್ದು ಯುವಕ ಮೃತಪಟ್ಟಿದ್ದಾನೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ (Arsinagundi Falls) ಈ ಘಟನೆ ನಡೆದಿದೆ.

ಇದನ್ನೂ ಓದಿ: Kantara Irkigedde Falls: ‘ಕಾಂತರಾ’ ಚಿತ್ರದಲ್ಲಿರುವ ಜಲಪಾತಕ್ಕೆ ಜೀವಕಳೆ, ಧುಮ್ಮಿಕ್ಕಿ ಹರಿಯುತ್ತಿರುವ ಇರ್ಕಿಗದ್ದೆ ಫಾಲ್ಸ್!

ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು,  ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:04 am, Mon, 24 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ