ಡಿವೈಡರ್​ಗೆ ಬೈಕ್ ಡಿಕ್ಕಿ: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಕಲ್ಲೂರು ತರುಣ್ ಕುಮಾರ್ ರೆಡ್ಡಿ(19), ಆದಿತ್ಯರೆಡ್ಡಿ(18) ಸೇರಿ ಮಣಿಪಾಲ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಇಬ್ಬರು ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ.

ಡಿವೈಡರ್​ಗೆ ಬೈಕ್ ಡಿಕ್ಕಿ: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು
Follow us
TV9 Web
| Updated By: ಆಯೇಷಾ ಬಾನು

Updated on:Jul 17, 2022 | 7:16 PM

ಉಡುಪಿ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19), ಆದಿತ್ಯರೆಡ್ಡಿ(18) ಸೇರಿ ಮಣಿಪಾಲ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಇಬ್ಬರು ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರು ಹರಿಯುವುದನ್ನು ನೋಡುತ್ತಿದ್ದ ಆಟೋ ಚಾಲಕ ಕಾಲುವೆಯಲ್ಲಿ ಕೊಚ್ಚಿ ಹೋದ್ರು

ಇನ್ನು ಮತ್ತೊಂದು ಕಡೆ ತುಮಕೂರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ರಕ್ಷಣಾ ಕಾರ್ಯದ ಬಗ್ಗೆ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಿಂಗ್‌ ರಸ್ತೆಯ ಗುಬ್ಬಿ ಗೇಟ್‌ನ ದಾನ ಪ್ಯಾಲೇಸ್‌ ಬಳಿ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದರು. ಮಳೆಯಿಂದ ಕಾಲುವೆಯಲ್ಲಿ ಜೋರಾಗಿ ನೀರು ಹರಿಯುತ್ತಿತ್ತು. ನೀರು ಹರಿಯುವುದನ್ನ ನೋಡ್ತಿದ್ದಾಗ ಚಾಲಕ ಕೊಚ್ಚಿಹೋಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಬಳಿ ಅಪಘಾತ

ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಅಪಘಾತವಾಗಿದೆ. ಹೊಸೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಡಿಕ್ಕಿ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಸಿಗ್ನಲ್ ರೆಡ್ ಆಗಿದ್ರೂ ಕಾರು ಚಾಲಕ ಜಂಪ್ ಮಾಡಿದ್ದಾನೆ. ಕಾರು ತೆರಳಿದ್ದನ್ನು ಗಮನಿಸಿ ಹಿಂದಿನಿಂದ ಲಾರಿ ಕೂಡ ಮುನ್ನುಗ್ಗಿತ್ತು. ಕಾರು ಸಡನ್ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.

Published On - 6:41 pm, Sun, 17 July 22