ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ, ಬಿಜೆಪಿ ಮುಖಂಡ ಭಾಗಿ
ಉಡುಪಿ: ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಗಮನಾರ್ಹ ಸಂಗತಿ ಎಂದರೆ ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದಾರೆ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ […]
ಉಡುಪಿ: ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಗಮನಾರ್ಹ ಸಂಗತಿ ಎಂದರೆ ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದಾರೆ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.
ಮುಂಬೈನಿಂದ ಬಂದು ಕ್ವಾರಂಟೈನ್ನಲ್ಲಿರುವವರ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿರುವ ಇವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಈ ಘಟನೆ ಮತ್ತೆ ಮರುಕಳಿಸಬಾರದು. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಆಗ್ರಹಿಸಿದೆ.
Published On - 3:00 pm, Thu, 4 June 20