ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಮೃತ ಯುವಕರು
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 26, 2024 | 5:36 PM

ಉಡುಪಿ, ಮಾ.26: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ಹೋಗಿದ್ದರು. ಈ ವೇಳೆ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಹಾಸನ: ಹಾಸನ ತಾಲೂಕಿನ ಉದ್ದೂರು ಕೊಪ್ಪಲು ಗ್ರಾಮದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿದೆ. ಶುಭ(28) ಮೃತ ರ್ದುದೈವಿ. ಪತಿಯೇ ಹಲ್ಲೆಮಾಡಿ ಹತ್ಯೆ ಮಾಡಿರುವ ಬಗ್ಗೆ ಶುಭನಾ ಪೋಷಕರು ಆರೋಪಿಸಿದ್ದಾರೆ. ಮೂರುವರೆ ವರ್ಷದ ಹಿಂದೆ ಹಾಸನದ ಸುನೀಲ್ ಜೊತೆ ಶುಭ ಮದುವೆಯಾಗಿದ್ದರು. ಇದೀಗ ಮೃತಳ ಪತಿಯನ್ನು ಬಂಧಿಸಿ ಕಾನೂನು ಕ್ರಮಕ್ಕೆ‌ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಘಟನೆ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಲೇಔಟ್​ ವಿಲ್ಲಾವೊಂದರಲ್ಲಿ ಅಗ್ನಿ ಅವಘಡ; ತಾಯಿ-ಮಗಳು ಜಸ್ಟ್​ ಮಿಸ್​

ಆನೇಕಲ್: ಕಾನ್​ಕಾರ್ಡ್ ಕುಪರ್ಟಿನೊ ಲೇಔಟ್​ನ ವಿಲ್ಲಾದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು,​ ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದರು. ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್ ನಲ್ಲಿ ತಾಯಿ-ಮಗಳು ಇದ್ದರು. ಈ ವೇಳೆ ದೇವರ ಕೋಣೆಯಲ್ಲಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ:ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ದುರ್ಮರಣ, ಮಗಳ ರಕ್ಷಣೆಗೆ ಹೋದ ದಂಪತಿ ದುರಂತ ಅಂತ್ಯ

ಗ್ರೌಂಡ್ ಪ್ಲೋರ್​ನಲ್ಲಿ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬಾಲ್ಕನಿಯಿಂದ ಕೆಳಗೆ ಬರಲಾಗದೆ ತಾಯಿ-ಮಗಳ ರೋಧನೆ ಅನುಭವಿಸಿದ್ದರು. ಬಳಿಕ ತಾಯಿ-ಮಗಳ ಕಿರುಚಾಟ ಕೇಳಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಅಗ್ನಿ ಅವಘಡದಲ್ಲಿ ಸಿಲುಕಿದ್ದ ತಾಯಿ-ಮಗಳನ್ನು ರಕ್ಷಣೆ ಮಾಡಿ, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿದ್ದ ಬಟ್ಟೆ, ಮಂಚ, ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Tue, 26 March 24

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us