AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ

ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದ್ದು, ಘಟನೆಗೆ ಕಾರಣ ನಿಗೂಢವಾಗಿಯೇ ಉಳಿದಿದೆ. ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬ ಗೊಂದಲ ಸ್ಥಳೀಯರಲ್ಲಿ ಉದ್ಭವಿಸಿದ್ದು, ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉಡುಪಿಯಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 17, 2025 | 4:09 PM

Share

ಉಡುಪಿ, ಅಕ್ಟೋಬರ್​ 17: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ (Udupi) ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ

ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ

ಪ್ರೇಯಸಿ ಜೊತೆಗಿರುವ ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯರು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ​ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್​ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್​ನೋಟ್​ ಬರೆದಿರುವ ಅಭಿಷೇಕ್​, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಿನ್ನಲೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ತಿಳಿಸಿದ್ದಾರೆ. ಆದರೆ ಘಟನೆ ಬಗ್ಗೆ ಕಾರ್ಕಳ ಪೊಲೀಸರು ತನಿಖೆ ನಡೆಸಿದ್ದು, ಪ್ರೇಮ ವೈಫಲ್ಯದಿಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್ ತಿಳಿಸಿದ್ದಾರೆ. ಅಭಿಷೇಕ್​ ಪ್ರೀತಿಸಿದ ಯುವತಿಗೆ ಮದುವೆಯಾಗಿದ್ದು, ಆತ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಆತನ ಆರೋಪ ಸುಳ್ಳು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್