AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11.32 ಕೋಟಿ ರೂ. ವೆಚ್ಚದಲ್ಲಿ ಹೊಸ ರೂಪ ಪಡೆದ ಬೈಂದೂರಿನ ಸೋಮೇಶ್ವರ ಬೀಚ್: ಪ್ರವಾಸಿಗರನ್ನು ಸೆಳೆಯುತ್ತಿದೆ ‘ಪ್ರಕೃತಿ-ಆಧುನಿಕತೆಯ’ ಸಂಗಮ

ಬೈಂದೂರು ಸೋಮೇಶ್ವರ ಬೀಚ್ 11.32 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡು ಪ್ರವಾಸಿಗರನ್ನು ಆಕರ್ಷಿಸಲು ಸಿದ್ಧವಾಗಿದೆ. ಸುಂದರ ಪಾದಚಾರಿ ಮಾರ್ಗ, ವಿಶಾಲ ವಾಹನ ನಿಲುಗಡೆ, ನೈರ್ಮಲ್ಯ ಶೌಚಾಲಯ ಸೇರಿ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅರಬ್ಬೀ ಸಮುದ್ರ, ಒತ್ತಿನೆಣೆ ಗುಡ್ಡದ ರಮಣೀಯ ದೃಶ್ಯಗಳನ್ನು ಹೊಂದಿರುವ ಈ ಕಡಲತೀರವು ಕರಾವಳಿ ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕತೆಗೆ ಭಾರಿ ಉತ್ತೇಜನ ನೀಡಲಿದೆ. ಕುಟುಂಬ ಸಮೇತ ಭೇಟಿ ನೀಡಲು ಇದು ಸೂಕ್ತ ತಾಣ.

11.32 ಕೋಟಿ ರೂ. ವೆಚ್ಚದಲ್ಲಿ ಹೊಸ ರೂಪ ಪಡೆದ ಬೈಂದೂರಿನ ಸೋಮೇಶ್ವರ ಬೀಚ್: ಪ್ರವಾಸಿಗರನ್ನು ಸೆಳೆಯುತ್ತಿದೆ 'ಪ್ರಕೃತಿ-ಆಧುನಿಕತೆಯ' ಸಂಗಮ
ಸೋಮೇಶ್ವರ ಬೀಚ್Image Credit source: Tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 07, 2026 | 5:36 PM

Share

ಬೈಂದೂರು, ಸೆ.7: ಒಂದೆಡೆ ನೀಲಿಯ ಹೊದಿಕೆಯೊದ್ದ ಅರಬ್ಬೀ ಸಮುದ್ರ, ಮತ್ತೊಂದೆಡೆ ಹಸಿರಿನ ಸಿರಿ ಕಂಗೊಳಿಸುವ ಒತ್ತಿನೆಣೆ ಗುಡ್ಡ, ನಡುವೆ ಸಮುದ್ರವನ್ನು ಅಪ್ಪಿಕೊಳ್ಳುವ ಸುಮನಾವತಿ (ಬೈಂದೂರು) ನದಿ. ಇಂತಹ ಅಪರೂಪದ ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಬೈಂದೂರಿನ ಸೋಮೇಶ್ವರ ಬೀಚ್ ಇದೀಗ ಬರೋಬ್ಬರಿ 11.32 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಪ್ರವಾಸಿ ಸೌಲಭ್ಯಗಳೊಂದಿಗೆ ಹೊಸ ರೂಪ ಪಡೆದುಕೊಂಡು ಪ್ರವಾಸಿಗರನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ.

ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್‌ ವತಿಯಿಂದ ೨೦೨೩ರಲ್ಲಿ ಆರಂಭಗೊಂಡ ಅಭಿವೃದ್ಧಿ ಯೋಜನೆಯು ಇದೀಗ ಅಂತಿಮ ಹಂತ ತಲುಪಿದ್ದು, ಕರಾವಳಿ ಪ್ರವಾಸೋದ್ಯಮದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಿದ್ಧವಾಗಿದೆ.

ಕಡಲ ಸೌಂದರ್ಯವನ್ನು ಸವಿಯುತ್ತಾ ಪ್ರವಾಸಿಗರು ಹೆಜ್ಜೆ ಹಾಕಲು ಸುಂದರವಾದ ಪಾದಚಾರಿ ಮಾರ್ಗ ಹಾಗೂ ಅಲ್ಲಲ್ಲಿ ಕುಳಿತು ವಿಶ್ರಮಿಸಲು ಆಸನಗಳನ್ನು ನಿರ್ಮಿಸಲಾಗಿದೆ. ವಿಶಾಲ ವಾಹನ ನಿಲುಗಡೆ, ತಂಪಾದ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸಾರ್ವಜನಿಕ ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ವಿಶಾಲ ಪ್ರವಾಸಿ ಸೌಲಭ್ಯ ಕಲ್ಪಿಸಲು ಸರ್ಕಾರಿ ಜಾಗದ ಕೊರತೆಯಿದ್ದ ಕಾರಣ ಪ್ರವಾಸೋದ್ಯಮ ಇಲಾಖೆಯು 2.7 ಎಕರೆ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯೋಜನೆಯನ್ನು ಪೂರ್ಣಗೊಳಿಸಿದೆ. ಕಡಿಮೆ ಆಳ ಹಾಗೂ ಅತ್ಯಂತ ಸ್ವಚ್ಛ ಕಡಲತೀರ ಹೊಂದಿರುವ ಸೋಮೇಶ್ವರದಲ್ಲಿ ಸುಮನಾವತಿ ನದಿಯು ಸಮುದ್ರವನ್ನು ಸೇರುವ ಜಾಗದಲ್ಲಿ ಅತ್ಯಂತ ಸುಂದರವಾದ ಡೆಲ್ಟಾ ಪ್ರದೇಶ ರೂಪುಗೊಂಡಿದೆ.

ಉಡುಪಿ-ಕೊಲ್ಲೂರು-ಮುರುಡೇಶ್ವರ-ಗೋಕರ್ಣ ಕರಾವಳಿ ಪ್ರವಾಸೋದ್ಯಮ ಸರ್ಕ್ಯೂಟ್‌ನಲ್ಲಿ ಸೋಮೇಶ್ವರ ಬೀಚ್ ಪ್ರಮುಖ ಸ್ಥಾನ ಪಡೆದಿದೆ. ಈ ಅಭಿವೃದ್ಧಿ ಕಾಮಗಾರಿಯಿಂದಾಗಿ ಬೈಂದೂರು ಭಾಗದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಚುರುಕುಗೊಳ್ಳಲಿವೆ.

ಇದನ್ನೂ ಓದಿ: ಕಲಬುರಗಿ, ರಾಯಚೂರಿನಲ್ಲೇ ಅತಿ ಹೆಚ್ಚು ಫೇಕ್ ಡಾಕ್ಟರ್ಸ್: 582 ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ ಇಲಾಖೆಯಿಂದ ಶಿಸ್ತುಕ್ರಮ

ಹೋಟೆಲ್, ರೆಸ್ಟೋರೆಂಟ್, ಸ್ಥಳೀಯ ಆಹಾರ ಮಳಿಗೆಗಳು, ಸಾರಿಗೆ ಹಾಗೂ ಟೂರ್ ಗೈಡ್‌ಗಳ ಉದ್ಯೋಗಕ್ಕೆ ಹೊಸ ಉತ್ತೇಜನ ಸಿಗಲಿದ್ದು, ಸ್ಥಳೀಯ ಆರ್ಥಿಕತೆಗೆ ಭಾರಿ ಬೆಂಬಲ ಸಿಗುವ ನಿರೀಕ್ಷೆಯಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡೆ ಸೇರಿದಂತೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಒತ್ತಿನೆಣೆ ಗುಡ್ಡದ ಹಸಿರು ಹಾಗೂ ಸುಂದರ ಸೂರ್ಯಾಸ್ತದ ಸೊಬಗನ್ನು ಸವಿಯಲು ಇನ್ಮುಂದೆ ಕುಟುಂಬ ಸಮೇತ ಆಗಮಿಸುವ ಪ್ರವಾಸಿಗರಿಗೆ ಸೋಮೇಶ್ವರ ಬೀಚ್ ಅತ್ಯುತ್ತಮ ತಾಣವಾಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ