ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ
ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
ಉಡುಪಿ, ಸೆ.16: ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್ ಆಡಿಯೋ ಬಹಿರಂಗ, ಸುನಿಲ್ ಕುಮಾರ್ ಹೆಸರು ಪ್ರಸ್ತಾಪ
ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈ ನಡುವೆ, ಚೈತ್ರಾ ಮತ್ತು ಪ್ರಸಾದ್ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. ಅಷ್ಟು ಮಾತ್ರವಲ್ಲದೆ, ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಪ್ರಸ್ತಾಪವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:50 am, Sat, 16 September 23