ಮತಾಂತರ ನಿಷೇಧ ಕಾಯ್ದೆ ಜಾರಿಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ; ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ
ರಾಜ್ಯ ಸರ್ಕಾರ ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದಿದೆ. ಬಲವಂತದ ಮತಾಂತರ ನಡೆದರೆ ನಾವೇ ಕೇಸ್ ಹಾಕುತ್ತೇವೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
ಉಡುಪಿ: ಕರ್ನಾಟಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ವಿವಿಧ ಅಭಿಪ್ರಾಯಗಳು ಕೇಳಿಬರುತ್ತಿವೆ. ಒಂದೆಡೆ ಆಡಳಿತ ಪಕ್ಷದ ನಾಯಕರು ಹಾಗೂ ಹಿಂದೂ ಮುಖಂಡರು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ವಿವಿಧ ರೀತಿಯಿಂದ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ ಕ್ರೈಸ್ತ ಹಾಗೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಮತ್ತು ವಿರೋಧ ಪಕ್ಷಗಳ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ವಿರೋಧ ಅಭಿಪ್ರಾಯ ಹೊಂದಿದ್ದಾರೆ. ಅಂತೆ ಈಗ, ಕಾಯ್ದೆ ಜಾರಿಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಬೆಳಗಾವಿಯಲ್ಲಿ ಕ್ರೈಸ್ತ ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಯಾವುದೇ ಸಾಕ್ಷಿಯಿಲ್ಲ. ಕ್ರೈಸ್ತ ಧರ್ಮ ದಮನಿಸಲು ಕಾಯ್ದೆ ಜಾರಿಗೆ ಯತ್ನಿಸಲಾಗುತ್ತಿದೆ. ರಾಜ್ಯ ಸರ್ಕಾರ ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದಿದೆ. ಬಲವಂತದ ಮತಾಂತರ ನಡೆದರೆ ನಾವೇ ಕೇಸ್ ಹಾಕುತ್ತೇವೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಬಿಜೆಪಿಯ ಎಲ್ಲ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎನ್ನುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಪಕ್ಷ ನಾಯಕರು ಏನಾದರೂ ಹೇಳಲಿ. ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಟಿವಿ9ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ; ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ ಕ್ರಮವಾಗಬೇಕು: ಪ್ರಮೋದ್ ಮುತಾಲಿಕ್
ಇದನ್ನೂ ಓದಿ: ಮತಾಂತರ ಆಗೋರು ಅರ್ಜಿ ಕೊಡಬೇಕು, ನೊಟೀಸ್ ಬೋರ್ಡ್ಗೆ ಅಂಥವರ ಹೆಸರು ಹಾಕ್ತೀವಿ: ಸಚಿವ ಮಾಧುಸ್ವಾಮಿ
Published On - 4:19 pm, Mon, 13 December 21