ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು

| Updated By: ರಮೇಶ್ ಬಿ. ಜವಳಗೇರಾ

Updated on: Aug 10, 2023 | 2:17 PM

ಉಡುಪಿಯ ಅಂಬಲಪಾಡಿಯಲ್ಲಿರುವ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಸಿದ್ದಾರೆ. ಈ ಸಂಬಂಧ ಖುದ್ದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣದ ಸ್ಥಳ ಪರಿಶೀಲಿಸಿದರು.

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು
ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್
Follow us on

ಉಡುಪಿ, (ಆಗಸ್ಟ್ 10): ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ (Video) ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ(CID) ವಹಿಸಿದ್ದು, ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಇಂದು (ಆಗಸ್ಟ್ 10) ಉಡುಪಿಯ ಅಂಬಲಪಾಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಎಸ್​ಪಿಯಿಂದ ಮಾಹಿತಿ ಪಡೆದು ನಂತರ ಕಾಲೇಜಿಗೆ ಭೇಟಿ ನೀಡಿದ ಮನೀಶ್ ಕರ್ಬೀಕರ್, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿ ಬಳಿಕ ಕಾಲೇಜು ಆಡಳಿತಾಧಿಕಾರಿಯಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದು, ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ. ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್.ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ. ಶೀಘ್ರದಲ್ಲೇ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದ್ದು, ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ. ಮೂರು ಮೊಬೈಲ್ ಎಫ್ಎಸ್ಎಲ್ ವರದಿ ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ