ಉಡುಪಿ ಜನರು ಹೃದಯ ವೈಶಾಲ್ಯವುಳ್ಳವರು; ಕಷ್ಟಕ್ಕೆ ಪರಿಹಾರ ಕೇಳುವರೇ ವಿನಃ ವೈಯಕ್ತಿಕವಾಗಿ ಏನೂ ಕೇಳಲ್ಲ: ಸಿಎಂ ಬೊಮ್ಮಾಯಿ

ಕೊವಿಡ್ ಸೋಂಕಿತ ವ್ಯಕ್ತಿಯ ಅಕ್ಕಪಕ್ಕದ ನಾಲ್ಕು ಮನೆ ಸೀಲ್ ಮಾಡಲಾಗಿದೆ. ಪಾಸಿಟಿವ್ ವ್ಯಕ್ತಿಯ ಸಂಪರ್ಕದ 20 ಜನರನ್ನು ಟ್ರ್ಯಾಕ್ ಮಾಡಬೇಕು ಎಂದು ಅವರು ಸೂಚಿಸಿದರು.

ಉಡುಪಿ ಜನರು ಹೃದಯ ವೈಶಾಲ್ಯವುಳ್ಳವರು; ಕಷ್ಟಕ್ಕೆ ಪರಿಹಾರ ಕೇಳುವರೇ ವಿನಃ ವೈಯಕ್ತಿಕವಾಗಿ ಏನೂ ಕೇಳಲ್ಲ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Aug 12, 2021 | 11:34 PM

ಉಡುಪಿ: ಉಡುಪಿ ಭಾಗದ ಜತೆ ನನಗೆ ಉಡುಪಿ ಶ್ರೀಕೃಷ್ಣನನ್ನು ಹೊರತುಪಡಿಸಿದರೆ ಸಂಬಂಧವಿರಲಿಲ್ಲ. ಆದ್ರೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಉಡುಪಿಗೆ ನನ್ನನ್ನು ಉಸ್ತುವಾರಿ ಮಾಡಿದ್ದರು. ಉಡುಪಿಗೆ ಏಕೆ ನನ್ನ ಉಸ್ತುವಾರಿ ಮಾಡಿದ್ದರೆಂದು ಗೊತ್ತಿರಲಿಲ್ಲ. ಉಡುಪಿ ಜನರು ಹೃದಯ ವೈಶಾಲ್ಯವುಳ್ಳವರು. ಕಷ್ಟಕ್ಕೆ ಪರಿಹಾರ ಕೇಳ್ತಾರೆ ವಿನಃ ವೈಯಕ್ತಿಕವಾಗಿ ಏನೂ ಕೇಳಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳಿದ್ದೆ. ಆದರೆ ಸಿಎಂ ಆಗಿ ಉಸ್ತುವಾರಿಯಿಂದ ಮುಕ್ತನಾಗುವೆನೆಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮನದಾಳದ ಮಾತುಗಳನ್ನು ಹಂಚಿಕೊಂಡರು.

ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 2.60ರಷ್ಟಿದೆ. ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚು ನಿಗಾ ವಹಿಸಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಜಿಲ್ಲೆಯ ನಾಲ್ಕು ಕಡೆ ಆಕ್ಸಿಜನ್ ಪ್ಲ್ಯಾಂಟ್ ಸ್ಥಾಪಿಸುತ್ತೇವೆ. ಮೈಕ್ರೋ ಕಂಟೇನ್ಮೆಂಟ್ ಜೋನ್ ರಚನೆಗೂ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೊವಿಡ್ ಸೋಂಕಿತ ವ್ಯಕ್ತಿಯ ಅಕ್ಕಪಕ್ಕದ ನಾಲ್ಕು ಮನೆ ಸೀಲ್ ಮಾಡಲಾಗುವುದು. ಪಾಸಿಟಿವ್ ವ್ಯಕ್ತಿಯ ಸಂಪರ್ಕದ 20 ಜನರನ್ನು ಟ್ರ್ಯಾಕ್ ಮಾಡಬೇಕು. ಜಿಲ್ಲೆಯಲ್ಲಿ 1.75 ಲಕ್ಷ ಮಕ್ಕಳ ಸಾಮರ್ಥ್ಯದ ಕ್ಯಾಂಪ್ ಮಾಡಲಾಗಿದೆ. ಕೊವಿಡ್ 3ನೇ ಅಲೆ ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 2ನೇ ವಾರದಲ್ಲಿ ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತೇವೆ ಎಂದು ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.  ಹೂವಿನ ವ್ಯಾಪಾರಿಗಳ ಪ್ರತಿಭಟನೆಯ ಕುರಿತು ಸಹ ಪ್ರತಿಕ್ರಿಯಿಸಿದ ಸಿಎಂ,  ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡಬೇಕು ಎಂಬುದು ನನ್ನ ಉದ್ದೇಶವಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಮಾತ್ರ ಹೂಗುಚ್ಚ ಹಾರ ತುರಾಯಿ ಬೇಡ ಎಂದಿದ್ದೇನೆ. ಹೂವಿನ ವ್ಯಾಪಾರವನ್ನು ಖಾಸಗಿಯಾಗಿ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸರಕಾರಿ ಜಾಗದಲ್ಲಿ ಗಾರ್ಡ್ ಆಫ್ ಹಾನರ್ ಬೇಡ. ಬೆಂಗಳೂರಿಗೆ ಹೋದ ತಕ್ಷಣ ಆದೇಶವನ್ನು ಹೊರಡಿಸುತ್ತೇನೆ. ಪೊಲೀಸ್ ಸಮಾರಂಭದಲ್ಲಿ ಗೌರವ ವಂದನೆ ಕೊಟ್ಟರೆ ಸಾಕು ಎಂದು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನನಗೆ ಶುಭಕೋರುವ ಕಟೌಟ್  ಹೋರ್ಡಿಂಗ್ಸ್​ಗಳನ್ನು ಯಾರೂ ಹಾಕಬೇಡಿ. ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನೆಗೆ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: 

Assembly Session: ಸೆಪ್ಟೆಂಬರ್​ನಲ್ಲಿ ವಿಧಾನಸಭಾ ಅಧಿವೇಶನ; ಸಿಎಂ ಬಸವರಾಜ ಬೊಮ್ಮಾಯಿ

ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಬೇರೆ ರೀತಿ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

(CM Basavaraj Bommai says Udupi people are large in heart will take More surveillance to prevent Covid in Udupi and Dakshina Kannada districts)

Published On - 8:53 pm, Thu, 12 August 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?