ಪರಶುರಾಂ ಥೀಂ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರದ ಆರೋಪ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

|

Updated on: Nov 20, 2023 | 5:55 PM

ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸೋದ್ಯಮ ಆಕರ್ಷಣೀಯ ಸ್ಥಳವೋ ಎಂಬ ಗೊಂದಲವಿದೆ. ಮಾಜಿ ಸಿಎಂ ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಹಾಗೂ ಡಿಸಿಎಂ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ ಎಂದು ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾಹಿತಿ ನೀಡಿದ್ದಾರೆ.

ಪರಶುರಾಂ ಥೀಂ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರದ ಆರೋಪ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಪರಶುರಾಂ ಥೀಂ ಪಾರ್ಕ್
Follow us on

ಉಡುಪಿ, ನವೆಂಬರ್ 20: ಕಾರ್ಕಳದ (Karkala) ಪರಶುರಾಂ ಥೀಂ ಪಾರ್ಕ್ (Parashuram Theme Park) ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ (Siddaramaiah) ಆದೇಶಿಸಿದ್ದಾರೆ. ಈ ಕುರಿತು ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸೋಮವಾರ ಮಾಹಿತಿ ನೀಡಿದ್ದಾರೆ.

ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸೋದ್ಯಮ ಆಕರ್ಷಣೀಯ ಸ್ಥಳವೋ ಎಂಬ ಗೊಂದಲವಿದೆ. ಮಾಜಿ ಸಿಎಂ ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಹಾಗೂ ಡಿಸಿಎಂ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಸೊಂಟದ ಮೇಲಿರುವ ಪ್ರತಿಮೆಯ ಭಾಗವು ಕಾಣೆಯಾಗಿದೆ. ಅಧಿಕಾರಿಗಳನ್ನು ಕೇಳಿದಾಗ ವಿನ್ಯಾಸ ಬದಲಾವಣೆಗೆ ಕಳುಹಿಸಲಾಗಿದೆ ಎಂದರು. ಆದಾಗ್ಯೂ, ಈ ಸ್ಥಳವು ಹಸುಗಳ ಮೇಯುವ ಭೂಮಿಯಾಗಿದೆ. ಅಲ್ಲಿ ಪಾರ್ಕ್ ನಿರ್ಮಿಸದಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು ಎಂದು ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಹಿಂದಿನ ಸಿಎಂ ಪ್ರತಿಮೆ ಉದ್ಘಾಟಿಸಿದ ಬಳಿಕ ಜಿಲ್ಲಾಧಿಕಾರಿ ಅನುಮತಿ ಪಡೆಯದೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಪ್ರತಿಮೆ ಉದ್ಘಾಟನೆ ವೇಳೆ ಅದರ ಸೊಂಟದ ಮೇಲ್ಭಾಗದಲ್ಲಿ ಏನಿತ್ತು ಎಂಬ ಸತ್ಯ ಹೊರಬರಬೇಕು. ಧಾರ್ಮಿಕ ಕೇಂದ್ರವೋ ಅಥವಾ ಪ್ರವಾಸಿ ತಾಣವೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮುಂದಿನ ಉಡುಪಿ ಪ್ರವಾಸದಲ್ಲಿ ಈ ಸ್ಥಳವನ್ನು ನೀವು ನೋಡಲೇಬೇಕು!

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್‌ಕುಮಾರ್, ‘ಮಾಜಿ ಮುಖ್ಯಮಂತ್ರಿಗಳು ಉದ್ಯಾನವನ ಉದ್ಘಾಟನೆಗೂ ಮುನ್ನ ಸೂಕ್ತ ಮಾಹಿತಿ ಪಡೆಯಬೇಕಿತ್ತು. ಇದೀಗ ತನಿಖೆಗೆ ಆದೇಶ ನೀಡಲಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪರಶುರಾಮನಿಗೆ ಅವಮಾನ ಮಾಡಿದೆ. ತರಾತುರಿಯಲ್ಲಿ ಪ್ರತಿಮೆಯನ್ನು ಏಕೆ ನಿರ್ಮಿಸಲಾಗಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ