AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ಮಂಡಳಿಯಿಂದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಹೊಸ ಕಾಲೇಜು: ಸರ್ಕಾರಿ ಕಾಲೇಜುಗಳ ಪಠ್ಯಕ್ರಮ

ಪ್ರತಿ ಕಾಲೇಜಿಗೆ ₹ 2.50 ಕೋಟಿ ಅನುದಾನ ಮತ್ತು ಅಗತ್ಯ ಪ್ರಮಾಣದ ಭೂಮಿಯನ್ನು ವಕ್ಫ್ ಮಂಡಳಿಯೇ ಒದಗಿಸಲಿದೆ.

ವಕ್ಫ್​ ಮಂಡಳಿಯಿಂದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಹೊಸ ಕಾಲೇಜು: ಸರ್ಕಾರಿ ಕಾಲೇಜುಗಳ ಪಠ್ಯಕ್ರಮ
ಕರ್ನಾಟಕ
TV9 Web
| Edited By: |

Updated on:Nov 30, 2022 | 1:20 PM

Share

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ವಕ್ಫ್​ ಮಂಡಳಿ ಮುಂದಾಗಿದೆ. ಹೀಗೆ ನಿರ್ಮಿಸುವ ಪ್ರತಿ ಕಾಲೇಜಿಗೆ ₹ 2.50 ಕೋಟಿ ಅನುದಾನ ಮತ್ತು ಅಗತ್ಯ ಪ್ರಮಾಣದ ಭೂಮಿಯನ್ನು ವಕ್ಫ್ ಮಂಡಳಿಯೇ ಒದಗಿಸಲಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಲಾಗಿದೆ.  ‘ದಕ್ಷಿಣ‌ ಕನ್ನಡ‌ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ,‌ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹತ್ತು ಕಡೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಸ್ಥಾಪಿಸಲಾಗುವುದು’ ಎಂದು ವಕ್ಫ್ ಬೋರ್ಡ್​ ಅಧ್ಯಕ್ಷ ಶಫಿ ಸಅದಿ ಹೇಳಿದರು.

‘ಬಾಲಕಿಯರ ಶಿಕ್ಷಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಈ ಮೊದಲೇ ಚಿಂತನೆ ನಡೆಸಿದ್ದೆವು. ಹಿಜಾಬ್ ವಿವಾದಕ್ಕೂ ನಮ್ಮ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದ ಬೇರೆಲ್ಲಾ ಶಾಲಾ-ಕಾಲೇಜುಗಳ ರೀತಿಯಲ್ಲಿಯೂ ಈ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುತ್ತವೆ. ರಾಜ್ಯದ ಹಲವು ಜಿಲ್ಲೆಗಳಿಂದ ಈ ಸಂಬಂಧ ಬೇಡಿಕೆ ಬಂದಿದೆ. ಎಲ್ಲವನ್ನೂ ಪರಿಶೀಲಿಸುತ್ತೇವೆ’ ಎಂದು ಅವರು ತಿಳಿಸಿದರು.

‘ದಯವಿಟ್ಟು ಹೆಣ್ಣುಮಕ್ಕಳ ಶಿಕ್ಷಣವನ್ನು ಹಿಜಾಬ್ ನೆರಳಿನಲ್ಲಿ ನೋಡಬೇಡಿ. ರಾಜ್ಯದಲ್ಲಿ ಮೊದಲಿನಿಂದಲೇ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿಯೇ ಶಾಲೆ-ಕಾಲೇಜುಗಳಿಗೆ ಹೋಗುತ್ತಿದ್ದರು. ಕೆಲವರು ಹೋಗುತ್ತಿರಲಿಲ್ಲ. ಈಗಲೂ ಕೆಲವೆಡೆ ಹೋಗುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಹಿಜಾಬ್ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಿಂದ ಹೊರ ಬಂದ ಹೆಣ್ಣುಮಕ್ಕಳಿಗೂ ನಾವು ಆರಂಭಿಸಲಿರುವ ಶಾಲಾ-ಕಾಲೇಜುಗಳಲ್ಲಿ ಪ್ರವೇಶಾವಕಾಶ ಇರುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು.

‘ಹಿಜಾಬ್​ಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನ್ಯಾಯಾಲಯದ ಆದೇಶಗಳು ಸರ್ಕಾರಿ ಪಿಯು ಕಾಲೇಜುಗಳಿಗೆ ಮಾತ್ರವೇ ಅನ್ವಯವಾಗುತ್ತವೆ. ಇಸ್ಲಾಮಿಕ್ ಷರಿಯತ್ ನಿಯಮಗಳ ಪ್ರಕಾರ ಹಿಜಾಬ್​ ಧರಿಸಿಯೇ ಹೆಣ್ಣುಮಕ್ಕಳು ಶಾಲಾ-ಕಾಲೇಜುಗಳಿಗೆ ಹೋಗಬೇಕಾಗುತ್ತದೆ’ ಎಂದು ಅವರು ತಿಳಿಸಿದರು.

ಇದನ್ನೂಓದಿ: ಉಡುಪಿ: 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಫೈನ್ ಹಾಕುವುದಾಗಿ ಗದರಿದ ಪ್ರಿನ್ಸಿಪಾಲ್, ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 am, Wed, 30 November 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?