AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಭಾರೀ ಮಳೆ: ನೀರಿನಲ್ಲಿ ಕೊಚ್ಚಿ ಹೋದ ಕಾರು, ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಂತೂ ರಣ ಮಳೆಯಿಂದಾಗಿ ನೆರೆ ಉಂಟಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ರಕ್ಷಣಾ ತಂಡ ಸಹ ಬೀಡು ಬಿಟ್ಟಿದೆ. ಹೀಗಿರುವಾಗ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಕೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ(ಜುಲೈ 09) ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉಡುಪಿಯಲ್ಲಿ ಭಾರೀ ಮಳೆ: ನೀರಿನಲ್ಲಿ ಕೊಚ್ಚಿ ಹೋದ ಕಾರು, ನಾಳೆ ಶಾಲಾ-ಕಾಲೇಜುಗಳಿಗೆ ರಜೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಮೇಶ್ ಬಿ. ಜವಳಗೇರಾ|

Updated on: Jul 08, 2024 | 6:12 PM

Share

ಉಡುಪಿ, (ಜುಲೈ 08): ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ(ಜುಲೈ 09) ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದಲೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಲ ದಿನ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿತ್ತು. ಆದ್ರೆ, ಮಳೆ ಜಾಸ್ತಿಯಾಗಿ ಎಲ್ಲೆಡೆ ಪ್ರವಾಹ ಭೀತಿ ಶುರುವಾಗಿದ್ದರಿಂದ ನಾಳೆ ಕಾಲೇಜುಗಳಿಗೂ ಸಹ ರಜೆ ನೀಡಲಾಗಿದೆ.

ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ತರಗತಿಗಳು ಎಂದಿನಂತೆ ಇರಲಿವೆ.

ಇದನ್ನೂ ಓದಿ: Karnataka Rains: ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಉಡುಪಿ ಜಿಲ್ಲೆಯ ಹಲವು ರಸ್ತೆಗಳು ಜಲಾವೃತ

ಮಳೆಯಿಂದಾಗಿ ಜಿಲ್ಲೆಯ ಹಲವು ರಸ್ತೆಗಳು ಜಲಾವೃತವಾಗಿವೆ. ತಗ್ಗು ಪ್ರದೇಶದ ಹೊಲಗಳಿಗೆ ಮಳೆ ನೀರು ತುಂಬಿ ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ತುಂಬಿ ಚರಂಡಿ, ನದಿ ಹಾಗೂ ರಸ್ತೆ ಒಂದೇ ರೀತಿ ಕಾಣುತ್ತಿದೆ. ಗುಂಡಿಬೈಲ್‌ನಲ್ಲಿ ಕೃತಕ ಪ್ರವಾಹ ಉಂಟಾಗಿ ಈ ಭಾಗದಲ್ಲಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಮನೆಗಳಲ್ಲಿ ಸಿಲುಕಿಕೊಂಡಿದ್ದ ಹಲವರನ್ನು ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ.

ಗುಂಡಿಬೈಲ್‌ನ ಬಾಲಕಿಯರ ಪಿಜಿ ಒಳಗೆ ಮಳೆ ನೀರು ನುಗ್ಗಿದ್ದರಿಂದ ಕೂಡಲೇ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಕೆಲ ನಿವಾಸಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಇನ್ನು ಉಡುಪಿ ನಗರ ಪಾಲಿಕೆ ಆಯುಕ್ತರು ಗುಂಡಿಬೈಲ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು

ಭಾರೀ ಮಳೆಯಿಂದಾಗಿ ಉಡುಪಿಯ ಕನ್ನರ್ಪಾಡಿ-ಖಡೆಕಾರು ಸಂಪರ್ಕದ ರಸ್ತೆಯಲ್ಲಿ ಪ್ರವಾಹ ಉಂಟಾಗಿದ್ದು, ಇದರಲ್ಲಿ ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ನಾಲ್ವರು ಕಾರಿನಿಂದ ಆಚೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಉಡುಪಿಯ ಕನ್ನರ್ಪಾಡಿ-ಖಡೆಕಾರು ಸಂಪರ್ಕದ ರಸ್ತೆ ಮಳೆ ನೀರಿನಿಂದ ಸಂಪೂರ್ಣ ಜಲಾವೃತ ವಾಗಿತ್ತು. ಆದರೂ ಸಹ ಈ ರಸ್ತೆಯಲ್ಲಿ ಕಾರು ಬಂದಿದೆ. ಪರಿಣಾ ನೀರಿನ ರಭಸಕ್ಕೆ ಕಾರು ಕೊಚ್ಚಿಕೊಂಡು ಹೋಗಿದೆ. ಆಗ ಕಾರಿನಲ್ಲಿ ನಾಲ್ವರು ಆಚೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ನೀರಿಗೆ ಕೊಚ್ಚಿಕೊಂಡು ಹೋಗಿ ಗದ್ದೆಯಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹೊರಗೆ ಎಳೆದುತಂದಿರುವ ತೆಗೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ