ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನ ಮಾಡುತ್ತಿರುವ ಡಿಕೆ ಶಿವಕುಮಾರ್​ಗೆ ಸ್ವಾಗತ: ಬಿಜೆಪಿ ಶಾಸಕ ಸುನಿಲ್ ಕುಮಾರ್!

ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 1 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವರಿಗೆ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ವಿಶೇಷವಾಗಿ ಸಂದೇಶ ಪ್ರಕಟಿಸುವ ಮೂಲಕ ಸ್ವಾಗತ ಕೋರಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನ ಮಾಡುತ್ತಿರುವ ಡಿಕೆ ಶಿವಕುಮಾರ್​ಗೆ ಸ್ವಾಗತ: ಬಿಜೆಪಿ ಶಾಸಕ ಸುನಿಲ್ ಕುಮಾರ್!
ಡಿಕೆ ಶಿವಕುಮಾರ್ ಹಾಗೂ ಬಿಜೆಪಿ ಶಾಸಕ ಸುನಿಲ್ ಕುಮಾರ್
Edited By:

Updated on: Mar 01, 2025 | 3:23 PM

ಉಡುಪಿ, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಪು ಶ್ರೀ ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವ ಗದ್ದುಗೆ ಪ್ರತಿಷ್ಠೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ನಾಯಕರ ಸಭೆ, ಕಾರ್ಕಳದಲ್ಲಿ ನಡೆಯಲಿರುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇದೇ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ವಿಭಿನ್ನವಾಗಿ ಡಿಕೆ ಶಿವಕುಮಾರ್​​ಗೆ ಸ್ವಾಗತ ಕೋರಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನ ಮಾಡುತ್ತಿರುವ ಡಿಕೆ ಶಿವಕುಮಾರ್​ಗೆ ಹಿಂದುತ್ವದ ಭದ್ರ ಕೋಟೆಗೆ ಸ್ವಾಗತ ಎಂದು ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸುನಿಲ್ ಕುಮಾರ್ ಸಂದೇಶವೇನು?

‘‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದರೂ ಕುಂಭ ಮೇಳದಲ್ಲಿ ಮಿಂದ, ಎಐಸಿಸಿ ಮುನಿಸಿನ ಮಧ್ಯೆಯೂ ಈಶಾ ಫೌಂಡೇಶನ್ ಶಿವರಾತ್ರಿಯಲ್ಲಿ ನಿಂದ, ಹಿಂದುವಾಗಿ ಹುಟ್ಟಿ ಹಿಂದುವಾಗಿಯೇ ಸಾಯುವೆ ಎಂದ, ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನಸ್ಸು ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆತ್ಮೀಯ ಸ್ವಾಗತ. ನಿಮ್ಮ ಈ ಭೇಟಿ ಹಿಂದುತ್ವ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಫಲಪ್ರದವಾಗಲಿ’’ ಎಂದು ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
ರಾಜಕೀಯದಲ್ಲಿ ನಂಬಿಕೆ ಬಹಳ ಮುಖ್ಯ, ಅದನ್ನು ಕಳೆದುಕೊಳ್ಳಬಾರದು: ಸುರೇಶ್
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ

ಸುನಿಲ್ ಕುಮಾರ್ ಫೇಸ್​ಬುಕ್ ಸಂದೇಶ


ಡಿಕೆ ಶಿವಕುಮಾರ್ ಅವರ ಇತ್ತೀಚೆಗಿನ ಕೆಲವು ನಡೆಗಳು ಕರ್ನಾಟಕ ರಾಜಕಾರಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿವೆ. ಕುಂಭಮೇಳ ಸ್ನಾನ, ಈಶಾ ಫೌಂಡೇಶನ್ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಬಗ್ಗೆ ಹಲವು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಆಂತರಿಕ ವಲಯದಲ್ಲಿ ಕೂಡ ಡಿಕೆಶಿ ನಡೆಯ ಬಗ್ಗೆ ಪರ ವಿರೋಧ ಹೇಳಿಕೆಗಳು ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲೇ ಬಿಜೆಪಿ ಶಾಸಕ ಸುನಿಲ್ ಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನವಾಗಿ ಸಂದೇಶ ಪ್ರಕಟಿಸಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: ನಾನ್ಯಾಕೆ ಬೇರೆ ಧರ್ಮಕ್ಕೆ ಹೋಗಲಿ, ನನಗೆ ಮಾನವ ಧರ್ಮದ ಮೇಲೆ ಅಚಲ ನಂಬಿಕೆ: ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಬಗ್ಗೆ ಸುನಿಲ್ ಕುಮಾರ್ ವ್ಯಂಗ್ಯದಿಂದ ಆ ರೀತಿಯಸಂದೇಶ ಪ್ರಕಟಿಸಿದ್ದಾರೆಯೇ ಎಂಬುದು ಸದ್ಯದ ಮಟ್ಟಿಗೆ ಪ್ರಶ್ನೆಯಾಗಿ ಉಳಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ