ನಾಳೆ (ನ.18) ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ: ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
TV9kannada Web Team | Edited By: ಗಂಗಾಧರ್ ಬ. ಸಾಬೋಜಿ
Updated on: Nov 17, 2022 | 4:19 PM
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಶುಕ್ರವಾರ (ನ. 18) ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್
ಉಡುಪಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಶುಕ್ರವಾರ (ನ. 18) ಉಡುಪಿಗೆ ಆಗಮಿಸಲಿದ್ದಾರೆ. ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದು, ಬಳಿಕ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಚರ್ ಕಟ್ಟಡ ಉದ್ಘಾಟಿಸಲಿದ್ದಾರೆ. ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.