AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಕೊಠಡಿ ಬುಕಿಂಗ್ ಹೆಸರಿನಲ್ಲಿ ಹಣ ವಂಚನೆ ನಡೆಸಿದ ಸೈಬರ್ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ. QR ಕೋಡ್, PhonePe ಬಳಸಿ ವಂಚಿಸಲಾಗಿದ್ದು, ಹಲವು ಭಕ್ತರು ಮೋಸ ಹೋಗಿದ್ದಾರೆ. ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಬುಕ್ ಮಾಡುವಂತೆ ದೇವಾಲಯ ಆಡಳಿತ ಮನವಿ ಮಾಡಿದೆ.

ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು
ಕೊಲ್ಲೂರು ಮೂಕಾಂಬಿಕಾ ದೇಗುಲ
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on: Nov 06, 2025 | 11:08 AM

Share

ಉಡುಪಿ, ನವೆಂಬರ್ 6: ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kollur Mookambika Temple) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ನಿರ್ಮಿಸಿ ಭಕ್ತರಿಂದ ಹಣ ವಂಚನೆ ನಡೆಸಿದ ಸೈಬರ್ ಕಳ್ಳರ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ದೇವಾಲಯಕ್ಕೆ ಬರುವ ಭಕ್ತರು ಕೊಠಡಿ ಕಾಯ್ದಿರಿಸಲು ಬಳಸುವ ವೆಬ್​ಸೈಟ್ ರೀತಿ ನಕಲಿ ವೆಬ್​ಸೈಟ್ ನಿರ್ಮಿಸಿ ವಂಚನೆ ಎಸಗಲಾಗುತ್ತಿರುವುದು ಬೆಳಕಿಗೆ ಬಂದಿದೆ. ‘ಕರ್ನಾಟಕ ಟೆಂಪಲ್ ಅಕಮಡೇಶನ್’ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆಯಲಾಗಿತ್ತು. ಈ ಸೈಟ್‌ನಲ್ಲಿ QR ಕೋಡ್ ಮತ್ತು ಫೋನ್‌ಪೇ ಪಾವತಿ ಆಯ್ಕೆಗಳು ನೀಡಲಾಗಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸಲಾಗುತ್ತಿತ್ತು.

ವಾಟ್ಸಾಪ್ ಮೂಲಕ QR ಕೋಡ್ ಕಳುಹಿಸಿ ಯುಪಿಐ ಪಾವತಿಗೆ ಸೂಚಿಸಿ ಭಕ್ತರಿಂದ ಹಣ ವಂಚಿಸಲಾಗುತ್ತಿತ್ತು. ಪಾವತಿ ಮಾಡಿದ ಭಕ್ತರಿಗೆ ನಕಲಿ ರಶೀದಿ ಕಳುಹಿಸಲಾಗುತ್ತಿತ್ತು. ಆದರೆ, ಭಕ್ತರು ಕೊಲ್ಲೂರಿಗೆ ಬಂದಾಗ ನೋಂದಣಿ ದಾಖಲೆ ಇಲ್ಲದೇ ಇರುವುದರಿಂದ ಸಂಕಷ್ಟಕ್ಕೀಡಾಗುತ್ತಿದ್ದರು. ಇದರಿಂದಾಗಿ ವಂಚನೆ ಬಯಲಿಗೆ ಬಂದಿದೆ.

ಈ ಘಟನೆ ದೇವಾಲಯದ ಆಡಳಿತಾಧಿಕಾರಿಗಳ ಗಮನಕ್ಕೆ ಬಂದ ತಕ್ಷಣ, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಾಲಯದ ಪಕ್ಕದಲ್ಲಿರುವ ಲಲಿತಾಂಬಿಕಾ ಅತಿಥಿ ಗೃಹದಲ್ಲಿ ಕೊಠಡಿ ಬುಕ್ ಮಾಡುವ ಹೆಸರಿನಲ್ಲಿ ಈ ನಕಲಿ ವೆಬ್​ಸೈಟ್ ದಂಧೆ ನಡೆದಿರುವ ಬಗ್ಗೆ ಶಂಕಿಸಲಾಗಿದೆ.

ಭಕ್ತರೇ, ವೆಬ್​ಸೈಟ್ ಮೂಲಕ ಕೊಠಡಿ ಕಾಯ್ದಿರುಸುವಾಗ ಎಚ್ಚರ

ನಕಲಿ ವೆಬ್​ಸೈಟ್ ಮೂಲಕ ವಂಚನೆ ಬಗ್ಗೆ ದೇವಾಲಯದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಅವರು ‘ಟಿವಿ9’ ಹೇಳಿಕೆ ನೀಡಿದ್ದು, ರಾಜ್ಯದ ಎ-ಗ್ರೇಡ್ ದೇವಾಲಯಗಳಿಗೆ ಸರ್ಕಾರದಿಂದ ಅಧಿಕೃತ ವೆಬ್‌ಸೈಟ್ ಇದೆ. ಅದು ‘ಕರ್ನಾಟಕ ಟೆಂಪಲ್ಸ್ ಅಕಮಡೇಶನ್’ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸರ್ಕಾರಿ ಸೈಟ್‌ನಲ್ಲಿ ಯಾವುದೇ ಕ್ಯೂಆರ್ ಕೋಡ್ ಪಾವತಿ ವ್ಯವಸ್ಥೆ ಇಲ್ಲ. ಭಕ್ತರು ನಕಲಿ ಲಿಂಕ್‌ಗಳಿಗೆ ಹೋಗದೆ ಅಧಿಕೃತ ಸೈಟ್‌ನಿಂದ ಮಾತ್ರ ಬುಕಿಂಗ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ಸಿಇಒ​ಗಿಂತಲೂ ಅಧಿಕ ಆಸ್ತಿ ಗಳಿಸಿರುವ ಅಕೌಂಟೆಂಟ್ ಜಗದೀಶ್!

2024ರ ಫೆಬ್ರವರಿ ತಿಂಗಳಲ್ಲಿಯೂ ಇದೇ ರೀತಿಯ ನಕಲಿ ಲಿಂಕ್ ಮೂಲಕ ಭಕ್ತರು ಮೋಸ ಹೋಗಿದ್ದ ಘಟನೆ ವರದಿಯಾಗಿತ್ತು. ಆಗ ‘Kollur Devotees Trust’ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್ ಹರಡಲಾಗಿತ್ತು. ಈಗ ಮತ್ತೆ ಅದೇ ರೀತಿಯ ವಂಚನೆ ಪುನರಾವರ್ತನೆಯಾಗಿದ್ದು, ಸರ್ಕಾರ ಹಾಗೂ ಪೊಲೀಸರು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ