ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿಗೆ ಜಿಲ್ಲಾಡಳಿತ ನಿರ್ಧಾರ
ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಮತ್ತು ಶನಿವಾರ, ಭಾನುವಾರ ವಾರಾಂತ್ಯ ಕರ್ಫ್ಯೂ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಮತ್ತು ಶನಿವಾರ, ಭಾನುವಾರ ವಾರಾಂತ್ಯ ಕರ್ಫ್ಯೂ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿಯ ಜೊತೆಗೆ ರಾಜಕೀಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗುವುದು. ಮದುವೆಯಲ್ಲಿ ಪಾಲ್ಗೊಳ್ಳಲು ಇನ್ನು ಮುಂದೆ 400 ಜನರಿಗಷ್ಟೇ ಅವಕಾಶ ಇರುತ್ತದೆ. ಧಾರ್ಮಿಕ ಕ್ಷೇತ್ರದಲ್ಲಿ ಉತ್ಸವ, ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸೆಪ್ಟೆಂಬರ್ 13ರವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಿಂದ 9ರಿಂದ ಪ್ರಥಮ ಪಿಯು ತರಗತಿಗಳು ಆರಂಭವಾಗಿವೆ. ರಾಜ್ಯಾದ್ಯಂತ ಆಗಸ್ಟ್ 23ರಿಂದಲೇ 9ನೇ ತರಗತಿಯಿಂದ 11ನೇ ತರಗತಿಗಳು ಆರಂಭವಾಗಿತ್ತು. ಪಾಸಿಟಿವಿಟಿ ರೇಟ್ ಹೆಚ್ಚಿದ್ದರಿಂದ ಉಡುಪಿಯಲ್ಲಿ ಶಾಲೆ ತೆರೆದಿರಲಿಲ್ಲ. ಸದ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ (Positivity Rate) ಇಳಿಕೆಯಾಗಿದೆ. ಹಾಗಾಗಿ ತರಗತಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.
ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಬೆಂಚಿನಲ್ಲಿ ಇಬ್ಬರೇ ಕುಳಿತು ಪಾಠ ಕೇಳುತ್ತಿದ್ದಾರೆ. ವ್ಯಾಕ್ಸಿನ್ ಪಡೆದ ಪೋಷಕರ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
(District Administration Decides to Implement Night and Weekend Curfew in Udupi)
ಇದನ್ನೂ ಓದಿ: ಡೆಲ್ಟಾ ಪ್ರಭೇದದ ವಿರುದ್ಧ ಕೊರೊನಾ ಲಸಿಕೆ ಪರಿಣಾಮಕಾರಿ: ಐಸಿಎಂಆರ್
ಇದನ್ನೂ ಓದಿ: ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್