ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ: ಪ್ರಮೋದ್ ಮುತಾಲಿಕ್
ದೇವಸ್ಥಾನದ ಬಳಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ. ಹಿಂದೂ ವ್ಯಾಪಾರಿಗಳ ಮಳಿಗೆಗೆ ಕೇಸರಿ ಧ್ವಜ ಅಳವಡಿಸಿದ ಕ್ರಮ ಸರಿಯಾಗಿದೆ. ಈಗೀಗ ಮಳಿಗೆಗಳಿಗೆ ಹಿಂದೂ ಹೆಸರು ಇಟ್ಟುಕೊಂಡು ಮುಸ್ಲೀಮರು ವ್ಯಾಪಾರ ಮಾಡುತ್ತಾರೆ. ಹಿಂದೂಗಳು ಹಣೆ ಮೇಲೆ ಕುಂಕುಮ, ಭಸ್ಮ ಹಚ್ಚಿಕೊಂಡು ವ್ಯಾಪಾರ ಮಾಡಿ ಎಂದು ಪ್ರಮೋದ್ ಮುತಾಲಿಕ್ ಕರೆ ಕೊಟ್ಟರು.
ಉಡುಪಿ ಅ.17: ಮಂಗಳೂರು (Mangaluru) ಮಂಗಳಾದೇವಿ ದೇವಸ್ಥಾನದಲ್ಲಿ (Mangala Devi Temple) ಮುಸ್ಲಿಂ (Muslim) ವ್ಯಾಪಾರಿಗಳಿಗೆ ನಿರ್ಬಂಧಕ್ಕೆ ಸಂಬಂಧಿಸಿದಂತೆ ದೇವಾಲಯದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಆದರೆ ಮಂಗಳಾದೇವಿ ಆವರಣದಲ್ಲಿ ಮುಸ್ಲೀಮರಿಗೆ ಅವಕಾಶ ಕೊಟ್ಟಿದ್ದಾರೆ. ವಿಶ್ವ ಹಿಂದೂ ಪರಿಷತ್ ಹೋರಾಟಕ್ಕೆ ನನ್ನ ಬೆಂಬಲವಿದೆ. ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ. ಅಲ್ಲಾಹು ಒಬ್ಬನೇ ದೇವರು ಅನ್ನೋರಿಗೆ ಬಹುದೇವ ಉಪಾಸಕರ ವ್ಯಾಪಾರ ಯಾಕೆ? ದೇಶದ ಸುರಕ್ಷತೆ ಹಿನ್ನೆಲೆಯಲ್ಲಿ ದಯವಿಟ್ಟು ಈ ರೀತಿ ಅವಕಾಶ ಬೇಡ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದೇವಸ್ಥಾನದ ಬಳಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ. ಹಿಂದೂ ವ್ಯಾಪಾರಿಗಳ ಮಳಿಗೆಗೆ ಕೇಸರಿ ಧ್ವಜ ಅಳವಡಿಸಿದ ಕ್ರಮ ಸರಿಯಾಗಿದೆ. ಈಗೀಗ ಮಳಿಗೆಗಳಿಗೆ ಹಿಂದೂ ಹೆಸರು ಇಟ್ಟುಕೊಂಡು ಮುಸ್ಲೀಮರು ವ್ಯಾಪಾರ ಮಾಡುತ್ತಾರೆ. ಹಿಂದೂಗಳು ಹಣೆ ಮೇಲೆ ಕುಂಕುಮ, ಭಸ್ಮ ಹಚ್ಚಿಕೊಂಡು ವ್ಯಾಪಾರ ಮಾಡಿ ಎಂದು ಕರೆ ಕೊಟ್ಟರು.
ಇದನ್ನೂ ಓದಿ: Navarathri 2023 : ಕರಾವಳಿ ಕರ್ನಾಟಕದ ನವರಾತ್ರಿ ಹಬ್ಬದಲ್ಲಿ ಹುಲಿಕುಣಿತ ಪ್ರಮುಖ ಆಕರ್ಷಣೆ, ಇದರ ವಿಶೇಷತೆಗಳೇನು?
ಸಲಿಂಗಿ ವಿವಾಹ ಸುಪ್ರೀಂಕೋರ್ಟ್ ತೀರ್ಪು ವಿಚಾರವಾಗಿ ಮಾತನಾಡಿದ ಅವರು ಸಲಿಂಗಿ ಮದುವೆ ಪ್ರಕೃತಿಗೆ ವಿರುದ್ಧ, ಇದು ನಾನು ಒಪ್ಪಲ್ಲ. ಅತ್ಯಂತ ಅಸಹ್ಯವಾದ ಪ್ರಕ್ರಿಯೆ, ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ. ಕೇಂದ್ರ ಸರ್ಕಾರದ ನಿಲುವು ಸರಿಯಿದೆ. ಸೃಷ್ಟಿಯ ವಿರುದ್ಧ ಕ್ರಿಯೆಗೆ ಕಾನೂನು ಮುದ್ರೆ ಸರಿಯಲ್ಲ. ಮದುವೆ ಪವಿತ್ರವಾದ ಬಂಧನ, ಅದಕ್ಕೆ ಕಳಂಕ ಬೇಡ. ಬೇಕಾದಷ್ಟು ಪ್ರೀತಿ ಮಾಡಿ ಅಡ್ಡಿಯಿಲ್ಲ, ಸಲಿಂಗಿ ಮದುವೆ ಬೇಡ ಎಂದರು.
ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ
ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುವ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ ಆರಂಭವಾಗಿದ್ದು, 24 ರ ವರೆಗೆ ನಡೆಯಲಿದೆ. ಈ ಉತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ದೇವಸ್ಥಾನದ ಆಡಳಿತ ಮಂಡಳಿ ಅವಕಾಶ ನೀಡಿರಲಿಲ್ಲ.
ಮುಸ್ಲಿಮರ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿತ್ತು. ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ