ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೋ ವಾಹನವೊMದು ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅವಘಡದ ರಭಸಕ್ಕೆ ವಾಹನದ ಚಾಲಕ ಹಾಗೂ ಸಹಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ದಿನೇಶ್(35) ಮತ್ತು ಮಂಜು(30) ಎಂದು ಗುರುತಿಸಲಾಗಿದೆ. ಇಬ್ಬರು ತರಕಾರಿ ವ್ಯಾಪಾರಿಗಳಾಗಿದ್ದರು.
ಕುಂದಾಪುರದಿಂದ ಉಡುಪಿಗೆ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ತರಕಾರಿ ಹೊತ್ತು ಬರುತ್ತಿದ್ದಾಗ ಅಂಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನವು ಅಲ್ಲೇ ಇದ್ದ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿದೆ.