AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ; ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮರ್ಥನೆ

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅವಶ್ಯಕತೆ ಇಲ್ಲದಿದ್ದರೆ ಬರಗೂರು ರಾಮಚಂದ್ರಪ್ಪರನ್ನು ಯಾಕೆ ಈ ಹಿಂದೆ ಅಧ್ಯಕ್ಷರನ್ನಾಗಿ ಮಾಡಿದಿರಿ? ಎಂದು ಪ್ರಶ್ನಿಸಿರುವ ಅವರು, ಈಹಿಂದೆ ಪಠ್ಯಪುಸ್ತಕಗಳನ್ನು ನೋಡಿದರೆ ಜನ ಹಿಡ್ಕೊಂಡು ಹೊಡೆಯಬೇಕಿತ್ತು. ವಿವೇಕಾನಂದರ ಭಾಷಣವನ್ನೇ ಪಠ್ಯದಲ್ಲಿ ತಿರುಚಲಾಗಿತ್ತು. ಜ್ಞಾನಪೀಠ ಪಡೆದವರ ಪಾಠವನ್ನೇ ಕಿತ್ತು ಹಾಕಲಾಗಿತ್ತು ಎಂದು ದೂರಿದರು.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ; ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮರ್ಥನೆ
ರೋಹಿತ್ ಚಕ್ರತೀರ್ಥ ಮತ್ತು ಬಿ.ಸಿ.ನಾಗೇಶ್
TV9 Web
| Edited By: |

Updated on: Oct 08, 2021 | 5:40 PM

Share

ಉಡುಪಿ: ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ. ಇತ್ತೀಚಿಗೆ ಎಲ್ಲವನ್ನೂ ವಿರೋಧಿಸುವ ಮಾನಸಿಕತೆ ಬಂದುಬಿಟ್ಟಿದೆ. ಕಾಂಗ್ರೆಸ್​ಗೆ ವಿರೋಧ ಪಕ್ಷದಲ್ಲಿ ಹೆಚ್ಚು ದಿನ ಕುಳಿತ ಅನುಭವವಿಲ್ಲ. ವಿರೋಧ ಪಕ್ಷದ ಸಂಸ್ಕೃತಿಯನ್ನು ಕಾಂಗ್ರೆಸ್ ಕಲಿತಿಲ್ಲ. ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಆಯ್ಕೆಯನ್ನು ಯಾವ ಕಾರಣಕ್ಕೆ ವಿರೋಧಿಸುತ್ತೀರಿ ಎಂದು ಕಾಂಗ್ರೆಸ್​ನವರು ತಿಳಿಸಲಿ ಎಂದು ಅವರು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅವಶ್ಯಕತೆ ಇಲ್ಲದಿದ್ದರೆ ಬರಗೂರು ರಾಮಚಂದ್ರಪ್ಪರನ್ನು ಯಾಕೆ ಈ ಹಿಂದೆ ಅಧ್ಯಕ್ಷರನ್ನಾಗಿ ಮಾಡಿದಿರಿ? ಎಂದು ಪ್ರಶ್ನಿಸಿರುವ ಅವರು, ಈಹಿಂದೆ ಪಠ್ಯಪುಸ್ತಕಗಳನ್ನು ನೋಡಿದರೆ ಜನ ಹಿಡ್ಕೊಂಡು ಹೊಡೆಯಬೇಕಿತ್ತು. ವಿವೇಕಾನಂದರ ಭಾಷಣವನ್ನೇ ಪಠ್ಯದಲ್ಲಿ ತಿರುಚಲಾಗಿತ್ತು. ಜ್ಞಾನಪೀಠ ಪಡೆದವರ ಪಾಠವನ್ನೇ ಕಿತ್ತು ಹಾಕಲಾಗಿತ್ತು. ವಾಲ್ಮೀಕಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮಹಾಋಷಿಯಾಗಿದ್ದಾ? ವಾಲ್ಮೀಕಿ ಅವರನ್ನು ಏಕವಚನದಲ್ಲಿ ಸಂಬೋಧಿಸಲಾಗಿತ್ತು. ಪುಸ್ತಕದ ಬಗ್ಗೆ ಸಾರ್ವಜನಿಕವಾಗಿ ಇಂತಹ ಸಾವಿರಾರು ಆಪಾದನೆ ಬಂದಿದ್ದವು. ಇದೀಗ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಆಯ್ಕೆ ಮಾಡಿರುವುದನ್ನು ವೈಯಕ್ತಿಕ ವೈಚಾರಿಕತೆಯಲ್ಲಿ ಮುಳುಗಿರುವವರು ಪ್ರಶ್ನೆ ಮಾಡುತ್ತಿದ್ದಾರೆ. ತಾವು ಮಾಡಿದ ತಪ್ಪು ಎಲ್ಲಿ ಜಗಜ್ಜಾಹೀರಾಗಿತ್ತೋ ಎಂಬ ಭಯ ಕೆಲವರಿಗೆ ಇದೆ ಎಂದು ಅವರು ವ್ಯಂಗ್ಯ ಮಾಡಿದರು.

ಸೆಪ್ಟೆಂಬರ್ 8ರಂದು ಹೊರಡಿಸಿರುವ ಅದೇಶದ ಪ್ರಕಾರ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು 1ರಿಂದ 10ನೆ ತರಗತಿಯವರೆಗಿನ ಸಮಾಜ ವಿಜ್ಞಾನ, ಪರಿಸರ ಅಧ್ಯಯನ ಮತ್ತು ಭಾಷಾ ವಿಷಯಗಳ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡಲಿದೆ. ಈ ಸಮಿತಿಯನ್ನು ಕಾಂಗ್ರೆಸ್ ಕಟುವಾಗಿ ವಿರೋಧಿಸಿದೆ.

ಇದನ್ನೂ ಓದಿ:

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು