ಉಡುಪಿ: ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆ ರಾಜ್ಯದಲ್ಲಿ ಹಲವೆಡೆ ಸಾಮರಸ್ಯಕ್ಕೆ ಕಾರಣವಾದರೆ ಇನ್ನು ಕೆಲವೆಡೆ ಕೋಮು ಸಂಘರ್ಷಕ್ಕೂ ಎಡೆಮಾಡಿಕೊಟ್ಟಿದೆ. ಕರಾವಳಿ ಪ್ರದೇಶದಲ್ಲಿ ಈದ್ ಮಿಲಾದ್ ಸಂಘರ್ಷ ಹಾಗೂ ಸಾಮರಸ್ಯಕ್ಕೆ ಕಾರಣವಾಗಿದೆ. ಇದೀಗ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಶಾಲೆಯೊಂದರಲ್ಲಿ ಈದ್ ಆಚರಣೆ ಮಾಡಿರುವುದು ವಿರೋಧಕ್ಕೆ ಗುರಿಯಾಗಿದೆ.

ಉಡುಪಿ: ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ
ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma

Updated on:Sep 19, 2024 | 9:30 AM

ಉಡುಪಿ, ಸೆಪ್ಟೆಂಬರ್ 19: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಮಧ್ಯೆ, ಘಟನೆ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇನು ಅರಬ್​ಸ್ತಾನ ಅಂದುಕೊಂಡಿದ್ದಾರೆಯೋ? ಶಾಲೆಗಳಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಈದ್ ಮಿಲಾದ್ ಆಚರಣೆ ಮಾಡಿದ್ದಲ್ಲದೆ, ಅರಬ್ ರಾಷ್ಟ್ರದ ಉಡುಪು ಧರಿಸಿ ಕುಣಿದಿದ್ದಾರೆ. ಹಿಂದೂ ಮಕ್ಕಳ ಮೇಲೆ ಪ್ರಭಾವ ಬೀರುವಂತೆ ಮಾಡಿದ್ದಾರೆ. ಕೂಡಲೇ ಉಡುಪಿ ಡಿಡಿಪಿಐ ಮಧ್ಯಪ್ರವೇಶಿಸಬೇಕು. ಶಾಲೆಯನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಗೋವಾ ಮದ್ಯ ಅಕ್ರಮ ಸಾಗಾಟ: ಆರೋಪಿಯ ಬಂಧನ

ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲು ನಿಲ್ದಾಣದ ಬಳಿ ಅಕ್ರಮವಾಗಿ 1,42,798 ರೂ. ಮೌಲ್ಯದ ಗೋವಾ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಸೆಪ್ಟೆಂಬರ್ 17ರಂದು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್​​ಪೆಕ್ಟರ್ ಶುಭದಾ ಸಿ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಉಡುಪಿ: ಮತ್ತೋರ್ವರ ಜೀವ ಉಳಿಸಲು ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವು

ಆರೋಪಿಯನ್ನು ಅನಂತ್ ದೇವದಾಸ್ ಪ್ರಭು ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಸುಮಾರು 31 ಲೀ. ಗೋವಾ ಮದ್ಯ ಸಾಗಿಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Thu, 19 September 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್