ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ಬುಕ್ ಅಕೌಂಟ್ ಕಾಟ; ಹಣ ಪಾವತಿಸುವಂತೆ ಬೇಡಿಕೆ
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.
ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
ಇದನ್ನೂ ಓದಿ: ಮೈಸೂರು: ಫೇಸ್ಬುಕ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
Facebook Fraud | ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ