AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದವ ಅರೆಸ್ಟ್: ಆಸಾಮಿಯ ತಂತ್ರಗಾರಿಕೆಗೆ ಪೊಲೀಸರೇ ದಂಗು!

ದೇಶದ ಪ್ರಸಿದ್ಧ ಶಕ್ತಿ ಪೀಠಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್​ಸೈಟ್ ತೆರೆದು ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸಿರ್ ಎಂಬಾತನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಕ್ತರ ಹಣ ದೋಚಲು ಈತ ಯೋಜಿಸಿದ ತಂತ್ರಗಾರಿಕೆ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದವ ಅರೆಸ್ಟ್: ಆಸಾಮಿಯ ತಂತ್ರಗಾರಿಕೆಗೆ ಪೊಲೀಸರೇ ದಂಗು!
ಬಂಧಿತ ನಾಸಿರ್ (ಎಡ ಚಿತ್ರ) ಹಾಗೂ ಕೊಲ್ಲೂರು ದೇಗುಲದ ಸಂಗ್ರಹ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Dec 23, 2025 | 10:28 AM

Share

ಉಡುಪಿ, ಡಿಸೆಂಬರ್ 23: ಜನರ ಭಕ್ತಿಯನ್ನು ಬಂಡವಾಳ ಮಾಡಿಕೊಳ್ಳಲು ವಂಚಕರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇರುತ್ತಾರೆ. ಅದೇ ರೀತಿ, ಕೊಲ್ಲೂರು ಮೂಕಾಂಬಿಕಾ ದೇಗುಲದ (Kollur Mookambika Temple) ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ಭಕ್ತರ ಹಣ ಲಪಟಾಯಿಸುತ್ತಿದ್ದ ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸಿರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಸಿರ್ ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರದ ಭಕ್ತರಿಗೆ, ವಂಚಿಸಲು ಮಾಡಿಕೊಂಡ ತಯಾರಿ ನೋಡಿದರೆ ನೀವು ಬೆಚ್ಚಿ ಬೀಳುತ್ತಿರಿ! ಈತ ಕೊಲ್ಲೂರು ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ಆರಂಭಿಸಿ ಅಸಲಿ ಖಾತೆಗೆ ಸಡ್ಡು ಹೊಡೆಯುವ ರೀತಿಯಲ್ಲಿ ನಿರ್ವಹಿಸುತ್ತಿದ್ದ. ರೂಮ್ ಬುಕಿಂಗ್, ಹರಕೆ ಬುಕಿಂಗ್ ಎಲ್ಲವೂ ಈ ನಕಲಿ ವೆಬ್​ಸೈಟ್​​ನಲ್ಲಿ ಲೀಲಾಜಾಲವಾಗಿ ನಡೆಯುತ್ತಿತ್ತು. ಈ ನಕಲಿ ಅಕೌಂಟ್ ಮೂಲಕ ರೂಮ್ ಬುಕ್ ಮಾಡಿಕೊಂಡ ಭಕ್ತರು ಕ್ಷೇತ್ರಕ್ಕೆ ಬಂದಾಗ, ಅಸಲಿಯತ್ತು ಬಯಲಿಗೆ ಬಂದಿತ್ತು. ತಕ್ಷಣ ದೇವಾಲಯದ ಸಿಇಒ ಕೊಲ್ಲೂರು ಠಾಣೆಯಲ್ಲಿ ದೂರು ನೀಡಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು ರಾಜಸ್ಥಾನದಿಂದ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ.

ಹೆಚ್ಚಾಗಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ನಡೆಸುವ ಈ ರೀತಯ ವಂಚನೆಗಳು ಬಯಲಾಗುವುದು ಅಪರೂಪ. ಒಂದು ವೇಳೆ, ವಂಚನೆ ಬಯಲಾದರೂ ವಂಚಕರ ಬಂಧನವಾಗುವುದು ವಿರಳ. ಆದರೆ ಈ ವಿಚಾರದಲ್ಲಿ ಉಡುಪಿ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಸೈಬರ್ ವಂಚಕರ ‘ತಿಜೋರಿ’ ರಾಜಸ್ಥಾನದ ತಿಜಾರಿ!

ರಾಜಸ್ಥಾನದ ತಿಜಾರಿ ಎಂಬ ಜಿಲ್ಲೆ ಸೈಬರ್ ಅಪರಾಧಿಗಳ ತವರೂರು ಎಂದೇ ಕುಖ್ಯಾತವಾಗಿದೆ. ಬಹುತೇಕ ಸೈಬರ್ ಆರೋಪಿಗಳೇ ತುಂಬಿರುವ ಆ ಜಿಲ್ಲೆಗೆ ಹೋಗಿ ಆರೋಪಿಗಳನ್ನು ಹಿಡಿದು ತರುವುದು ಸುಲಭದ ಮಾತಲ್ಲ. ಅಲ್ಲಿ ಪೊಲೀಸರು ಕೂಡ ಸಹಕರಿಸುವುದಿಲ್ಲ ಎನ್ನಲಾಗಿದೆ. ಆದರೆ, ಇದೊಂದು ಪ್ರತಿಷ್ಠಿತ ಧಾರ್ಮಿಕ ಕೇಂದ್ರದ ವಿಚಾರವಾದ ಕಾರಣ ಸ್ಥಳೀಯ ಪೊಲೀಸರಿಗೆ ಮನದಟ್ಟು ಮಾಡಿ ಉಡುಪಿ ಪೊಲೀಸರು ಆರೋಪಿ ನಾಸಿರ್​ನನ್ನು ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು

ಬಂಧಿತ ನಾಸಿರ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಸರಕಾರಿ ಯೋಜನೆಗಳ ಹೆಸರಲ್ಲಿ ವಂಚನೆ ಮಾಡುವ ಅನೇಕ ಮಂದಿ ಈ ಜಿಲ್ಲೆಯಲ್ಲಿ ಇದ್ದು, ಅವರಿಂದಲೇ ಪ್ರೇರಣೆ ಪಡೆದು ತಾನು ಈ ಸಂಚು ಹೂಡಿರುವುದಾಗಿ ನಾಸಿರ್ ಒಪ್ಪಿಕೊಂಡಿದ್ದಾನೆ. ಪದವಿ ಕಲಿಯುತ್ತಿರುವ ಈತ ವಿದ್ಯಾರ್ಥಿ ಹಂತದಲ್ಲೇ ಪೊಲೀಸರ ಅತಿಥಿಯಾಗಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ