ಹುಟ್ಟುಹಬ್ಬದ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​

ಎರಡು ವರ್ಷ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 23 ವರ್ಷದ ಸಾಹಿಲ್‌ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಹುಟ್ಟುಹಬ್ಬದ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​
ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​
Follow us
ಸಾಧು ಶ್ರೀನಾಥ್​
|

Updated on:Apr 20, 2023 | 11:42 AM

ಉಡುಪಿ: ಬೈಂದೂರಿನ ಯುವತಿಯೊಂದಿಗೆ ಸ್ನೇಹ ಬೆಳೆಸಿದ ನಂತರ ಹಲವು ಬಾರಿ ಅತ್ಯಾಚಾರ ಎಸಗಿದ (rape) ಯುವಕನಿಗೆ ಕರ್ನಾಟಕದ ಉಡುಪಿ (Udupi) ಜಿಲ್ಲೆಯ ತ್ವರಿತ ಪೋಕ್ಸೋ ನ್ಯಾಯಾಲಯವು (POCSO court) 20 ವರ್ಷಗಳ ಕಠಿಣ ಜೈಲು ಶಿಕ್ಷೆ (imprisonment) ವಿಧಿಸಿದೆ. ಆರೋಪಪಟ್ಟಿ ಪ್ರಕಾರ ಸಾಹಿಲ್ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಹೋಟೆಲ್ ಬಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸಂತ್ರಸ್ತೆ ಉಡುಪಿಯ ಬೈಂದೂರು ಮೂಲದವರಾಗಿದ್ದು, ಆಕೆಯ ತಂದೆ ಸಾಗರದಲ್ಲಿ ಹೋಟೆಲ್ ಹೊಂದಿದ್ದರಿಂದ ಅಲ್ಲಿಯೇ ವಾಸವಾಗಿದ್ದರು. ಯುವಕ ಅವಳೊಂದಿಗೆ (girl) ಸಂಬಂಧವನ್ನು ಬೆಳೆಸಿದನು.

ಜುಲೈ 2021 ರಲ್ಲಿ, ಹುಡುಗಿಯ ಹುಟ್ಟುಹಬ್ಬದ (Birthday) ಆಚರಣೆಗಾಗಿ ಸಾಹಿಲ್ ಬೈಂದೂರಿಗೆ ಪ್ರಯಾಣ ಬೆಳೆಸಿದ್ದ. ಹುಟ್ಟುಹಬ್ಬದ ಪಾರ್ಟಿಯ ನಂತರ ಸಂತ್ರಸ್ತೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಯುವಕ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮೊದಲ ಘಟನೆಯ ನಂತರ ಪದೇ ಪದೇ ಕೃತ್ಯ ಎಸಗಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್

ಸಂತ್ರಸ್ತೆಯ ತಾಯಿಗೆ ಈ ಸಂಬಂಧ ತಿಳಿದಾಗ ಅವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ ಕಾಯ್ಕಿಣಿ ಅವರು ಪ್ರಕರಣದ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸಾಂದರ್ಭಿಕ ಸಾಕ್ಷ್ಯವನ್ನು ಪರಿಗಣಿಸಿದ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅವರು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 22,500 ರೂಪಾಯಿ ದಂಡವನ್ನು ವಿಧಿಸಿದ್ದಾರೆ.

ಸಂತ್ರಸ್ತೆಗೆ 1.5 ಲಕ್ಷ ರೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ ಟಿ ರಾಘವೇಂದ್ರ ವಾದ ಮಂಡಿಸಿದ್ದರು.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:38 am, Thu, 20 April 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್