ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ, ಮೂವರು ಮಕ್ಕಳ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರಗೆ ಸಾಗಿಸಲಾಗಿದೆ.

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 30, 2024 | 7:41 PM

ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಬೈಕ್‌ ಸವಾರ ಬಲಿ

ಬೆಂಗಳೂರು: ಬಿಎಂಟಿಸಿ (BMMTC) ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್​ಸ್ಟಿಟ್ಯೂಟ್ ಮುಂಭಾಗ ದುರ್ಘಟನೆ ನಡೆದಿದೆ. ಫುಲ್ ಹೆಲ್ಮೆಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಮೃತ ಬೈಕ್​ ಸವಾರ. ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್​ ತೆರಳುತ್ತಿದ್ದು, ಈ ವೇಳೆ ಕಾರ್​ಗೆ ಬೈಕ್ ಟಚ್ ಆಗಿ ಕೆಳಗೆಬಿದ್ದ ಈಶ್ವರ್ ತಲೆ ಮೇಲೆ ಬಸ್​ನ ಹಿಂದಿನ ಚಕ್ರ ಹರಿದಿದೆ. ಹೀಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಂಪುಬಣ್ಣದ ಹೆಲ್ಮೆಟ್ ಒಳಗೆ ಬೈಕ್ ಸವಾರ ತಲೆ ಛಿದ್ರವಾಗಿದ್ದು, ಘಟನಾ ಸ್ಥಳದಲ್ಲೇ ಈಶ್ವರ್ ಹೆಲ್ಮೆಟ್, ಶೂ ಬಿದ್ದಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Mon, 30 September 24

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು