ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಿನ ಅಭಾವದ ಆತಂಕ: ಹೀಗಿದೆ ಜಿಲ್ಲಾಡಳಿತಗಳ ಸಿದ್ಧತೆ

ಬರಗಾಲದ ಪರಿಣಾಮ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೀರಿನ ಅಭಾವದ ಆತಂಕ ಎದುರಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದ ಕಾರಣ ಜಿಲ್ಲಾಡಳಿತಗಳು ನಿರಾಳವಾಗಿವೆ. ಆದಾಗ್ಯೂ ಸಂಭಾವ್ಯ ಅಭಾವವನ್ನು ಎದುರಿಸುವ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಗಳನ್ನು ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಿನ ಅಭಾವದ ಆತಂಕ: ಹೀಗಿದೆ ಜಿಲ್ಲಾಡಳಿತಗಳ ಸಿದ್ಧತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 24, 2024 | 4:29 PM

ಮಂಗಳೂರು, ಉಡುಪಿ, ಫೆಬ್ರವರಿ 24: ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ನೀರಿನ ಅಭಾವ (Water Scarcity) ಸೃಷ್ಟಿಯಾಗುವ ಆತಂಕ ಎದುರಾಗಿದೆ. ಬರದ ಕಾರಣ ಈ ವರ್ಷ ಬೇಸಿಗೆಗೂ (Summer) ಮುನ್ನವೇ ನೀರಿನ ಅಭಾವ ಸೃಷ್ಟಿಯಾಗುವಂತ ಪರಿಸ್ಥಿತಿ ಉದ್ಭವಿಸಿದ್ದು ಜಿಲ್ಲಾಡಳಿತಗಳು ಸಮಸ್ಯೆ ಎದುರಿಸಲು ಸಿದ್ಧತೆ ಆರಂಭಿಸಿವೆ. ಆದರೆ ಸದ್ಯದ ಮಟ್ಟಿಗೆ ಉಭಯ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಡಳಿತಗಳ ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ ತುರ್ತು ನೀರು ಸರಬರಾಜು ಅಗತ್ಯವಿರುವ ಪ್ರದೇಶಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಅಧಿಕಾರಿಗಳು ಈಗಾಗಲೇ ಆರಂಭಿಸಿದ್ದಾರೆ. ತುರ್ತು ಅಗತ್ಯವಿರುವ ಪ್ರದೇಶಗಳಿಗೆ ಟ್ಯಾಂಕರ್​​ಗಳ ಮೂಲಕ ನೀರು ಸರಬರಾಜಿಗೆ ಈಗಾಗಲೇ ಸಿದ್ಧತೆ ಆರಂಭಿಸಲಾಗಿದೆ. ಪ್ರಸ್ತುತ ಕುಡಿಯುವ ನೀರಿಗೆ ಆತಂಕ ಕಂಡುಬಂದಿಲ್ಲ. ಇದು ಭರದ ನಡುವೆಯೂ ತುಸು ಸಮಾಧಾನಕರ ಸಂಗತಿ ಎಂದು ಜಿಲ್ಲಾಡಳಿತ ತಿಳಿಸಿದೆ.

ಉಡುಪಿನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕುಂದಾಪುರ, ಕಾರ್ಕಳ, ಬೈಂದೂರು, ಸಾಲಿಗ್ರಾಮ ಮತ್ತು 155 ಗ್ರಾಮಗಳ ಹಲವಾರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

ಉಡುಪಿ ಜಿಲ್ಲೆಯ ಅಣೆಕಟ್ಟೆಗಳಲ್ಲಿ ನೀರಿನ ಕೊರತೆ

ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಬಜೆ ಅಣೆಕಟ್ಟು ಸದ್ಯ ಕೇವಲ 6.10 ಮೀಟರ್ ನೀರಿನ ಮಟ್ಟವನ್ನು ಹೊಂದಿದೆ. ಇದರಿಂದಾಗಿ ಅಂತರ್ಜಲ ಬಳಕೆಯ ಪ್ರಮಾಣವು ಹೆಚ್ಚಾಗಿರುವುದು ಆತಂಕ ಸೃಷ್ಟಿಸಿದೆ. ವಾರಾಹಿ, ಸೀತಾ, ಸ್ವರ್ಣ, ಸೌಪರ್ಣಿಕಾ, ಪಾಪನಾಶಿನಿ ಮತ್ತಿತರ ನದಿಗಳಲ್ಲಿ ನೀರಿನ ಮಟ್ಟವು ಗಣನೀಯವಾಗಿ ಕಡಿಮೆಯಾಗಿದೆ. ವಾರ್ಷಿಕವಾಗಿ ಶೇಕಡ 25ರಷ್ಟು ಮಳೆ ಕೊರತೆ ಆಗಿರುವುದರಿಂದ ನೀರಿನ ಕೊರತೆ ಹೆಚ್ಚಾಗಿದೆ.

ಇದನ್ನೂ ಓದಿ: ಕಚ್ಚಾ ಬನಿಯನ್ ಗ್ಯಾಂಗ್ ಬಳಿಕ ಉಡುಪಿಯಲ್ಲಿ ಬುರ್ಖಾ ಗ್ಯಾಂಗ್; ಉಡುಪಿ ಪೊಲೀಸರಿಗೆ ಶುರುವಾಗಿದೆ ಹೊಸ ಟೆನ್ಶನ್

ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆ ತಡೆಗೆ ಜಿಲ್ಲಾಧಿಕಾರಿ ಸಭೆ

ಈ ಮಧ್ಯೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸದ್ದಾರೆ. ಸಭೆಯಲ್ಲಿ ಅವರು ತಹಶೀಲ್ದಾರರು ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ. ಮುಂಬರುವ ನೀರಿನ ಬಿಕ್ಕಟ್ಟನ್ನು ಸಮರ್ಥವಾಗಿ ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಕೊರತೆಯ ಕಾರಣ ಎರಡು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಈ ಎರಡು ತಾಲೂಕುಗಳು (ಮಂಗಳೂರು ಮತ್ತು ಮೂಡುಬಿದಿರೆ) ಸೇರಿದಂತೆ, ಯಾವ ಪ್ರದೇಶದಲ್ಲಿಯೂ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಮುಂಗಾರು ಹಂಗಾಮಿನ ನಂತರ ಈ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಇಲ್ಲಿಯವರೆಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಸನ್ನದ್ಧ

ಆಯಾ ಗ್ರಾಮ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸಂಭವನೀಯ ನೀರಿನ ಕೊರತೆಯ ಪ್ರದೇಶಗಳ ಪಟ್ಟಿಯನ್ನು ಮಾಡಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯವಾಗಿ ಮಂಗಳೂರು, ಬಂಟ್ವಾಳ ಮತ್ತು ಸುಳ್ಯ ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುತ್ತದೆ. ಕಳೆದ ವರ್ಷ ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದರಿಂದ ತೀವ್ರ ನೀರಿನ ಅಭಾವ ಉಂಟಾಗಿತ್ತು. ಆದರೆ, ಈ ವರ್ಷ ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಾನುವಾರುಗಳಿಗೆ ಹುಲ್ಲು ಕೂಡ ಸಿದ್ಧವಾಗಿ ಇಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್​ನ ಶಕ್ತಿ ಪ್ರದರ್ಶನ; ಇಲ್ಲಿದೆ ಝಲಕ್​

ಅಗತ್ಯವಿರುವ ಸಂದರ್ಭದಲ್ಲಿ ಬೋರ್‌ವೆಲ್‌ಗಳು ಮತ್ತು ಇತರ ಬಾವಿಗಳನ್ನು ಬಳಸಿಕೊಳ್ಳಲು ಸರ್ಕಾರದಿಂದ ಡಿಸಿಗೆ ಸೂಚನೆಗಳನ್ನು ನೀಡಲಾಗುತ್ತದೆ. ಗುಡ್ಡಗಾಡು ಮತ್ತು ದೂರದ ಪ್ರದೇಶಗಳಲ್ಲಿ ನೀರಿನ ಕೊರತೆ ಕಂಡುಬಂದಲ್ಲಿ ಟ್ಯಾಂಕರ್‌ಗಳ ಬಳಕೆ ಮಾಡಬೇಕು. ಬಾಡಿಗೆ ನೀರಿನ ಟ್ಯಾಂಕರ್‌ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲು ಪಾರದರ್ಶಕ ಟೆಂಡರ್ ಪ್ರಕ್ರಿಯೆ ನಡೆಸಬೇಕು ಎಂದು ಜಿಲ್ಲಾಡಳಿತದ ಮೂಲಗಳು ಹೇಳಿವೆ.

ಜಿಲ್ಲೆಯಲ್ಲಿ ಇದುವರೆಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ. ಪ್ರತಿ ತಾಲ್ಲೂಕಿನಲ್ಲಿ ಸಭೆಗಳನ್ನು ನಡೆಸಿ ಪರಿಸ್ಥಿತಿಯ ಮಾಹಿತಿ ಸಂಗ್ರಹಿಸಲು ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ