Udupi New: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿಯರ ವಿರುದ್ಧ ಎಫ್​ಐಆರ್ ದಾಖಲು

| Updated By: ರಮೇಶ್ ಬಿ. ಜವಳಗೇರಾ

Updated on: Jul 26, 2023 | 2:09 PM

ಉಡುಪಿಯ ನೇತ್ರ ಕಾಲೇಜುಗಳಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ದೂರು ದಾಖಲಾಗಿದೆ.

Udupi New: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿಯರ ವಿರುದ್ಧ ಎಫ್​ಐಆರ್ ದಾಖಲು
ಸಾಂದರ್ಭಿಕ ಚಿತ್ರ
Follow us on

ಉಡುಪಿ, (ಜುಲೈ 25): ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದ ಎಬ್ಬಿಸಿದ್ದ ಉಡುಪಿಯ (Udupi) ಖಾಸಗಿ ಕಾಲೇಜಿನ(College ) ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿದ್ಯಾರ್ಥಿನಿಯರ ವಿರುದ್ಧ ದೂರು ದಾಖಲಾಗಿದೆ. ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಉಡುಪಿಯ ನೇತ್ರ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೋಲಿಸರು ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್​ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನೇತ್ರಾ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಒಂದು ಮೂವರು ವಿದ್ಯಾರ್ಥಿನಿಯರು ವಿಡಿಯೋ ಚಿತ್ರೀಕರಿಸಿದ ಮೂವರು ವಿದ್ಯಾರ್ಥಿನಿಯರ ವಿರುದ್ಧ ದೂರು ದಾಖಲಾಗಿದ್ದರೆ, ಮತ್ತೊಂದು ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಿಡನ್ ಕ್ಯಾಮೆರಾ ವೀಡಿಯೊವನ್ನು ಅಪ್‌ಲೋಡ್ ಮಾಡಿರುವುದರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಾಲೇಜು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಚಿತ್ರೀಕರಣ: ದಾಖಲೆ ಇದ್ದರೆ ನೀಡಿ ಸಹಕರಿಸಿ, ತಪ್ಪು ಮಾಹಿತಿ ನೀಡಿದರೆ ಕ್ರಮ -ಎಸ್ಪಿ ಅಕ್ಷಯ್ ಮಚ್ಚೀಂದ್ರ

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ಕದ್ದಮುಚ್ಚಿ ಮೊಬೈಲ್ ಫೋನ್ ಇಟ್ಟು ಚಿತ್ರೀಕರಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ನಿನ್ನೆ (ಜುಲೈ 25) ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಚಾರ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ವಿಚಾರದ ಜೊತೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿದೆ. ಹಿಡನ್ ಕ್ಯಾಮರಾ ಮೂಲಕ ವಿಡಿಯೋ ಚಿತ್ರೀಕರಿಸಿದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಬ್ಯ್ಲಾಕ್​ಮೇಲ್​ ಬಗ್ಗೆ ವಿಡಿಯೋ ಹರಿದಾಡಿದ ಬಗ್ಗೆ ಗಮನ ಹರಿಸಿದ್ದೇವೆ. ಬೇರೆ ಕಡೆ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ. ಸತ್ಯಾಸತ್ಯತೆ ಗೊತ್ತಿಲ್ಲದೆ ಎಲ್ಲೆಡೆ ವಿಡಿಯೋ ಶೇರ್ ಮಾಡಿದ್ರೆ ತಪ್ಪಾಗುತ್ತದೆ ಎಂದಿದ್ದರು.

ವೈರಲ್ ಆಗಿರುವ ಬಗ್ಗೆ ಫೇಸ್​ಬುಕ್, ವಾಟ್ಸಾಪ್​ ಮೇಲೆ ನಿಗಾ ಇರಿಸಲಾಗಿದೆ. ರಶ್ಮಿ ಸಾವಂತ್​ ಹೆಸರಿನಲ್ಲಿ ಟ್ವೀಟ್​ ಬಗ್ಗೆ ಅಕೌಂಟ್ ಪರಿಶೀಲಿಸಿದ್ದೇವೆ. ಇದೇ ವಿಚಾರದಲ್ಲಿ ಅವರ ಮನೆಯವರ ಬಳಿ ಮಾತನಾಡಿದ್ದೇವೆ. ಯಾವುದೇ ದುರುದ್ದೇಶದಿಂದ ಮಾಹಿತಿ ಪಡೆದುಕೊಂಡದ್ದಲ್ಲ ಎಂದು ಅಕ್ಷಯ್ ಮಚ್ಚೀಂದ್ರ ಸ್ಪಷ್ಟನೆ ನೀಡಿದ್ದರು.

ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

ಇನ್ನು ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ್ದ ನೇತ್ರಜ್ಯೋತಿ ಕಾಲೇಜು (Netra Jyothi College) ಆಡಳಿತ ಮಂಡಳಿ, ತಮಾಷೆಗೆ ವಿಡಿಯೋ ಮಾಡಿರುವುದಾಗಿ ವಿದ್ಯಾರ್ಥಿನಿಯರು ಹೇಳಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ವಿಚಾರ ತಿಳಿಯುತ್ತಿದ್ದಂತೆ ವಿಚಾರಣೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದೆವು ಎಂದು ಸ್ಪಷ್ಟನೆ ನೀಡಿದ್ದರು.

ಜುಲೈ 18 ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಹಿಂದೂ ವಿದ್ಯಾರ್ಥಿನಿ ಮಧ್ಯೆ ಜಗಳ ನಡೆದಿತ್ತು. ಇದೇ ಸಮಯದಲ್ಲಿ ಶೌಚಾಲಯದಲ್ಲಿದ್ದ ಹಿಂದೂ ವಿದ್ಯಾರ್ಥಿನಿ ವಿಡಿಯೋವನ್ನ ಸೆರೆ ಹಿಡಿದಿದ್ದಾರೆ ಎನ್ನುವ ಸುದ್ದಿ, ಕಾಲೇಜು ಆಡಳಿತ ಮಂಡಳಿಗೂ ಮುಟ್ಟಿತ್ತು. ತಕ್ಷಣ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿತ್ತು. ಹಿಂದೂ ವಿದ್ಯಾರ್ಥಿನಿ ದೂರು ಕೂಡ ನೀಡಲು ಮುಂದಾಗಿರಲಿಲ್ಲ. ಅಲ್ಲಿಗೆ ವಿಷಯ ಮುಗಿಯುತ್ತೆ ಅಂದುಕೊಂಡು ಆಡಳಿತ ಮಂಡಳಿ ಸುಮ್ಮನಾಗಿತ್ತು. ಆದ್ರೆ, ಈ ಸುದ್ದಿ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಜುಲೈ 20 ರಂದು ಕಾಲೇಜಿಗೆ ಭೇಟಿ ನೀಡಿದ್ದರು. ಆದ್ರೆ, ವಿದ್ಯಾರ್ಥಿನಿಯರನ್ನ ಅಮಾನತು ಮಾಡಿರುವ ವಿಷಯ ತಿಳಿದು ವಾಪಸಾಗಿದ್ದರು.

ಅಷ್ಟರಲ್ಲೇ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ವಿಚಾರ ವೈರಲ್‌ ಆಗಿತ್ತು. ಹಿಂದೂ ಯುವತಿಯರ ವಿಡಿಯೋಗಳನ್ನ ಮುಸ್ಲಿಂ ಯುವಕರಿಗೆ ಕಳಿಸಲಾಗುತ್ತಿದೆ ಎನ್ನುವ ಆರೋಪ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಇದೇ ಹೊತ್ತಿಗೆ ಲಂಡನ್‌ ಆಕ್ಸ್‌ಫರ್ಡ್‌ ವಿವಿಯ ಮಾಜಿ ವಿದ್ಯಾರ್ಥಿ ನಾಯಕಿ ರಶ್ಮಿ ಸಾಮಂತ್‌ ಮಾಡಿದ ಟ್ವೀಟ್‌ ಬೆಂಕಿಗೆ ತುಪ್ಪ ಸುರಿದಿದ್ದು, ನೂರಾರು ಹಿಂದೂ ಯುವತಿಯರ ವಿಡಿಯೋ ಮಾಡಿದ್ದಾರೆ ಎಂದು ಗಂಭೀರ ಆರೋಪ ಭಾರಿ ಗದ್ದಲ ಎಬ್ಬಿಸಿತ್ತು. ಇದೀಗ ಈ ಪ್ರಕರಣ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 26 July 23