AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ

ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ತೊಡೆತಟ್ಟಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ ಅವರು ಇಂದು ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಸಮಾವೇಶ ನಡೆಸಿದರು. ಕಾರ್ಯಕರ್ತರಿಗಾಗಿ ಬಿರಿಯಾನಿ ಕೂಡ ಸಿದ್ಧಪಡಿಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಫ್ಲೈಯಿಂಗ್ ಸ್ಕ್ವಾಡ್ ಸಮಾವೇಶದ ಮೇಲೆ ದಾಳಿ ನಡೆಸಿ ಬಿರಿಯಾನಿ ನೀಡದಂತೆ ಎಚ್ಚರಿಕೆ ನೀಡಿದೆ.

ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ
ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi|

Updated on: Mar 31, 2024 | 5:50 PM

Share

ಉಡುಪಿ, ಮಾ.31: ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಮಕ್ಕಳ ವಿರುದ್ಧ ತೊಡೆತಟ್ಟಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ (KS Eshwarappa) ಅವರು ಇಂದು ಉಡುಪಿ (Udupi) ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಸಮಾವೇಶ ನಡೆಸಿದರು. ಕಾರ್ಯಕರ್ತರಿಗಾಗಿ ಬಿರಿಯಾನಿ ಕೂಡ ಸಿದ್ಧಪಡಿಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಫ್ಲೈಯಿಂಗ್ ಸ್ಕ್ವಾಡ್ (Flying Squad) ಸಮಾವೇಶದ ಮೇಲೆ ದಾಳಿ ನಡೆಸಿ ಬಿರಿಯಾನಿ ಹಂಚದಂತೆ ಎಚ್ಚರಿಕೆ ನೀಡಿದೆ.

ಈಶ್ವರಪ್ಪ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕಾರ್ಯಕರ್ತರಿಗೆ ಮಧ್ಯಾಹ್ನದ ಊಟಕ್ಕೆಂದು ಬಿರಿಯಾನಿ ಕೂಡ ಸಿದ್ಧಪಡಿಸಲಾಗಿತ್ತು. ಆದರೆ, ಸಮಾವೇಶ ನಡೆಯುತ್ತಿದ್ದ ಸಭಾಂಗಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದ್ದು, ಬಿರಿಯಾನಿ ಸಪ್ಲೈ ಮಾಡಿದರೆ ಚುನಾವಣೆ ವೆಚ್ಚಕ್ಕೆ ಸೇರ್ಪಡೆಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ತಯಾರಿಸುತ್ತಿದ್ದ ಬಿರಿಯಾನಿ ಅಲ್ಲೇ ಬಾಕಿಯಾಗಿದ್ದು, ಬಿರಿಯಾನಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು, ಬಿರಿಯಾನಿ ತಿನ್ನದೇ ವಾಪಸಾದರು.

ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ರೀತಿಯಲ್ಲಿ ರಾಜ್ಯದಲ್ಲೂ ಕುಟುಂಬ ರಾಜಕಾರಣ ಇದೆ. ಬಿಜೆಪಿ 28 ಸ್ಥಾನ ಗೆಲ್ಲುವುದು ಮುಖ್ಯ ಅಲ್ಲ, ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಯಡಿಯೂರಪ್ಪನಿಗೆ ಮುಖ್ಯವಾಗಿದೆ. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿ ರಾಘವೇಂದ್ರ ಸೋಲುತ್ತಾನೆ, ವಿಜಯೇಂದ್ರ ರಾಜೀನಾಮೆ ಕೊಡುತ್ತಾನೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಬೇಕು ಎಂದರು.

ಇದನ್ನೂ ಓದಿ: ಬಂಡಾಯ ಸ್ಪರ್ಧೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕಾರಣವೇ? ಈಶ್ವರಪ್ಪ ಸ್ಫೋಟಕ ಹೇಳಿಕೆ

ಚುನಾವಣೆಗೆ ಮುನ್ನ ನಾನು ಯಾವುದೇ ಆಶ್ವಾಸನೆ ಕೊಡುವುದಿಲ್ಲ. ಗೆದ್ದು ಬಂದು ಎಲ್ಲಾ ಕೆಲಸವನ್ನು ಮಾಡುತ್ತೇನೆ. ಶಿವಮೊಗ್ಗದಲ್ಲೂ ಬೈಂದೂರಲ್ಲಿ ಯಾರು ಲೀಡ್ ನೋಡೋಣ. ನಾಮಪತ್ರ ಸಲ್ಲಿಕೆ ದಿನ ಯಡಿಯೂರಪ್ಪ ರಾಘವೇಂದ್ರನಿಗೆ ನಡುಕ ಆಗಬೇಕು. ರಾಷ್ಟ್ರಭಕ್ತ ಬಳಗ ನಾಮಪತ್ರ ದಿನ ಶಿವಮೊಗ್ಗದಲ್ಲಿ ಜಾತ್ರೆ ಮಾಡುತ್ತದೆ ಎಂದರು.

ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಬಿಜೆಪಿ

ಕಾಂಗ್ರೆಸ್ ಜೊತೆ ಬಿಜೆಪಿ ಕೈಜೋಡಿಸಿದ್ದು, ಒಪ್ಪಂದ ಮಾಡಿದ್ದು ದುರ್ದೈವ ಎಂದು ಆಕ್ರೋಶ ಹೊರಹಾಕಿದ ಈಶ್ವರಪ್ಪ, ಈ ಬಾರಿಯ ಶಿವಮೊಗ್ಗದ ಲೋಕಸಭೆ ಚುನಾವಣೆ ದುಡ್ಡು ಮತ್ತು ಹಿಂದುತ್ವದ ಕಾರ್ಯಕರ್ತರ ನಡುವಿನ ಚುನಾವಣೆಯಾಗಿದೆ. ಗೀತಾ ಶಿವರಾಜ್ ಕುಮಾರ್ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಬೆಂಬಲಿಸಿದ್ದಾರೆ. ಯಡಿಯೂರಪ್ಪನ ದುಡ್ಡು, ಜಾತಿ ಮೀರಿ ಲೋಕಸಭೆಗೆ ಹೋಗುತ್ತೇನೆ ಎಂದರು.

ಬಿಜೆಪಿಯಲ್ಲಿ ಹಿಂದುತ್ವ ನಾಯಕರ ಮೂಲೆಗುಂಪು

ಹಿಂದುತ್ವ ನಾಯಕರನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಈಶ್ವರಪ್ಪ, ಹಿಂದೂ, ರಾಮ ಮಂದಿರ, ಗೋವು ಬಗ್ಗೆ ಮಾತಾಡುವವರು ಪಕ್ಷದಲ್ಲಿ ಮೂಲೆಗುಂಪಾಗುತ್ತಿದ್ದಾರೆ. ಸಿ.ಟಿ ರವಿಯನ್ನು ರಾಜೀನಾಮೆ ಕೊಡಿಸಿದರು. ಪಕ್ಷ ಸಂಘಟನೆ ಬಗ್ಗೆ ಇಡೀ ದೇಶ ಸುತ್ತಿಸಿದರೂ ಅವರಿಗೆ ಎಂಪಿ ಟಿಕೆಟ್ ಕೊಡಲಿಲ್ಲ. ನಮ್ಮ ಹಿಂದೂ ಕಾರ್ಯಕರ್ತರು ಕೂಲಿಯಾಳುಗಳಲ್ಲ. ಹಿಂದುತ್ವ ಬಗ್ಗೆ ಮಾತಾಡುವವರನ್ನು ಪಕ್ಷದಲ್ಲಿ ಪಕ್ಕಕ್ಕಿಡುತ್ತಿದ್ದಾರೆ. ಸದಾನಂದ ಗೌಡ, ಯತ್ನಾಳ್, ಪ್ರತಾಪ್ ಸಿಂಹನಿಗೆ ಮೋಸವಾಗುತ್ತಿದೆ ಎಂದರು.

ಕೆಜೆಪಿ ಕಟ್ಟಿದ ಯಡಿಯೂರಪ್ಪಗೆ ಸಿಕ್ಕಿದ್ದು 6 ಸೀಟು ಮಾತ್ರ. ಶಿಕಾರಿಪುರದಲ್ಲಿ ಬಿಜೆಪಿ ಅಂತರ 60 ಸಾವಿರದಿಂದ 10 ಸಾವಿರಕ್ಕೆ ಇಳಿದಿದೆ. ಈಶ್ವರಪ್ಪ ಯಾವತ್ತಿದ್ದರೂ ಬಿಜೆಪಿಯೇ, ಮತ್ತೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಎಂಪಿಯಾಗಿ ಗೆದ್ದು ಮೋದಿಯನ್ನು ಪ್ರಧಾನಿ ಮಾಡಲು ಕೈ ಎತ್ತುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ